ADVERTISEMENT

ರಾಹುಲ್‌ ಇ.ಡಿ. ವಿಚಾರಣೆ: ಅಧಿಕಾರಿಗಳಿಂದ ಸುಳ್ಳು ಮಾಹಿತಿ- ಡಿ.ಕೆ. ಸುರೇಶ್

​ಪ್ರಜಾವಾಣಿ ವಾರ್ತೆ
Published 16 ಜೂನ್ 2022, 13:21 IST
Last Updated 16 ಜೂನ್ 2022, 13:21 IST
ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್
ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್   

ನವದೆಹಲಿ: ‘ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುಳ್ಳು ಮಾಹಿತಿಗಳನ್ನು ಹರಿಯಬಿಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಆರೋಪಿಸಿದರು.

ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಧಿಕಾರಿಗಳು ಮಾಧ್ಯಮಗಳಿಗೆ ಇಲ್ಲಸಲ್ಲದ ಮಾಹಿತಿ ನೀಡಿ ರಾಹುಲ್‌ ಅವರ ಘನತೆಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಎಲ್ಲ ಪ್ರಶ್ನೆಗಳಿಗೆ ನಮ್ಮ ನಾಯಕರು ಉತ್ತರ ನೀಡಿದ್ದಾರೆ. ಬಿಜೆಪಿಯ ಕುತಂತ್ರ ಎದುರಿಸುವ ಶಕ್ತಿ ಕಾಂಗ್ರೆಸ್‌ಗೆ ಇದೆ. ಇ.ಡಿ., ಸಿಬಿಐ ಬಳಸಿ ನಮ್ಮನ್ನು ಮಟ್ಟ ಹಾಕಲು ಸಾಧ್ಯವಿಲ್ಲ’ ಎಂದರು.

‘ಮೂರು ದಿನಗಳಿಂದರಾಹುಲ್ ಗಾಂಧಿಯವರನ್ನು ವಿಚಾರಣೆ ಮಾಡಲಾಗಿದೆ. ಅವರನ್ನು ಬೆಂಬಲಿಸಲು ಕಾಂಗ್ರೆಸ್ ಕಚೇರಿಗೆ ಹೋಗಿದ್ದೆವು.ಆದರೆ, ದೆಹಲಿ ಪೊಲೀಸರು ನಮ್ಮ ಮೇಲೆ ಹಲ್ಲೆ ಮಾಡಿ ಕತ್ತಲೆ ಕೋಣೆಯಲ್ಲಿ ಕೂರಿಸಿದರು. ಮಹಿಳಾ ಸಂಸದರ ಮೇಲೂ ದೌರ್ಜನ್ಯ ನಡೆಸಿದರು. ಈ ಬಗ್ಗೆ ಲೋಕಸಭೆಯ ಸ್ಪೀಕರ್ ಅವರಿಗೆ ಮನವಿ ಸಲ್ಲಿಸಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.