ಚೆನ್ನೈ: ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರ ಆಪ್ತ, ಶಾಸಕ ಜೆ. ಅನ್ಬಳಗನ್ (62)ಕೋವಿಡ್-19ನಿಂದ ಸಾವಿಗೀಡಾಗಿದ್ದಾರೆ. ಕಳೆದ 8 ದಿನಗಳಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದರು.
ಚಪಾಕ್- ಟ್ರಿಪ್ಲಿಕೇನ್ ಕ್ಷೇತ್ರದ ಶಾಸಕರಾಗಿದ್ದ ಅನ್ಬಳಗನ್ ಬುಧವಾರ ಬೆಳಿಗ್ಗೆ 8.05ಕ್ಕೆ ಡಾಕ್ಟರ್ ರೇಲಾ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೆಂಟರ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ. ಜೂನ್ 2ರಂದು ಆಸ್ಪತ್ರೆಗೆ ದಾಖಲಾದ ಇವರಿಗೆ ಸೋಂಕು ಇರುವುದು ದೃಢಪಟ್ಟಿತ್ತು.
ಹುಟ್ಟಿದ ದಿನದಂದೇ (ಜನನ: ಜೂನ್ 10,1958) ಅನ್ಬಳಗನ್ ಸಾವಿಗೀಡಾಗಿದ್ದು , ಕೋವಿಡ್-19ನಿಂದಾಗಿ ತಮಿಳುನಾಡಿನಲ್ಲಿ ಮೃತಪಟ್ಟ ಮೊದಲ ಜನಪ್ರತಿನಿಧಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.