
ಚೆನ್ನೈ: ತಮಿಳುನಾಡಿನಲ್ಲಿ ಎಸ್‌ಐಆರ್ ನಡೆಯುತ್ತಿರುವ ವೇಳೆಯೇ ಅದರ ಕರಪತ್ರಗಳನ್ನು ಡಿಎಂಕೆ ಕಾರ್ಯಕರ್ತರು ಮತದಾರರಿಗೆ ಹಂಚುತ್ತಿದ್ದಾರೆ ಎಂದು ಎಐಡಿಎಂಕೆ ಹಿರಿಯ ನಾಯಕ ಡಿ. ಜಯಕುಮಾರ್ ಅವರು ಆರೋಪಿಸಿದ್ದಾರೆ.
ಮನೆ ಮನೆಗಳಿಗೆ ಎಸ್‌ಐಆರ್ ಕರಪತ್ರವನ್ನು ಹಂಚುವ ವೇಳೆ ಜನರ ಪ್ರಶ್ನೆಗಳಿಗೆ ಉತ್ತರಿಸಲು ಬೂತ್ ಮಟ್ಟದ ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಕೆಲವು ಅಧಿಕಾರಿಗಳು ಪಕ್ಷಪಾತ ಮಾಡುತ್ತಿದ್ದಾರೆ. ಡಿಎಂಕೆ ಕಡೆ ಒಲವಿರುವ ಅಧಿಕಾರಿಗಳು ಎಸ್‌ಐಆರ್ ಸುಗಮವಾಗಿ ನಡೆಯದಂತೆ ಮಾಡುತ್ತಿದ್ದಾರೆ. ಮತದಾರರಿಗೆ ಡಿಎಂಕೆ ಕಾರ್ಯಕರ್ತರು ಬಹಿರಂಗವಾಗಿಯೇ ಎಸ್‌ಐಆರ್ ಕರಪತ್ರ ಹಂಚುತ್ತಿದ್ದಾರೆ ಎಂದು ಹೇಳಿದ್ದಾರೆ.
ಶೋಲಿಂಗನಲ್ಲೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಸಹಜವಾಗಿ ಕರಪತ್ರಗಳನ್ನು ಹಂಚಲಾಗಿದೆ. ಇದು ಚುನಾವಣಾ ಅಧಿಕಾರಿಗಳು ಕರಪತ್ರ ಹಂಚದಿರುವುದನ್ನು ತೋರಿಸುತ್ತದೆ ಎಂದಿದ್ದಾರೆ.
ಎಸ್‌ಐಆರ್ ವೇಳೆ ನಡೆಯುತ್ತಿರುವ ಅಕ್ರಮಗಳು ಮತ್ತು ಹಸ್ತಕ್ಷೇಪದ ಕುರಿತು ಎಐಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.