ADVERTISEMENT

ಎಸ್‌ಐಆರ್‌ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಡಿಎಂಕೆ ಅರ್ಜಿ ಸಲ್ಲಿಕೆ

ಪಿಟಿಐ
Published 3 ನವೆಂಬರ್ 2025, 15:38 IST
Last Updated 3 ನವೆಂಬರ್ 2025, 15:38 IST
   

ಚೆನ್ನೈ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅನುಷ್ಠಾನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ಸೋಮವಾರ ಅರ್ಜಿ ಸಲ್ಲಿಸಿದೆ. 

ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್‌.ಎಸ್‌. ಭಾರತಿ ಅವರು ಪಕ್ಷದ ಸಂಸದ, ವಕೀಲ ಎನ್‌.ಆರ್‌. ಇಳಂಗೊ ಅವರ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದಿದ್ದ ಬಹು ಪಕ್ಷಗಳ ಸಭೆಯಲ್ಲಿ, ಎಸ್‌ಐಆರ್‌ ವಿರೋಧಿಸಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಲಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.