ADVERTISEMENT

ವಕ್ಫ್‌ ತಿದ್ದುಪಡಿ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಡಿಎಂಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಏಪ್ರಿಲ್ 2025, 5:51 IST
Last Updated 3 ಏಪ್ರಿಲ್ 2025, 5:51 IST
<div class="paragraphs"><p>ಎಂ.ಕೆ.ಸ್ಟಾಲಿನ್‌</p></div>

ಎಂ.ಕೆ.ಸ್ಟಾಲಿನ್‌

   

ಚೆನ್ನೈ: ಲೋಕಸಭೆ ಅಂಗೀಕರಿಸಿರುವ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಹೇಳಿದೆ.‌

ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿರುವುದನ್ನು ವಿರೋಧಿಸಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಸೇರಿದಂತೆ ಡಿಎಂಕೆ ಶಾಸಕರು ಕಪ್ಪುಪಟ್ಟಿ ಧರಿಸಿ ಗುರುವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು.

ADVERTISEMENT

ನಂತರ ಸದನವನ್ನುದ್ದೇಶಿಸಿ ಮಾತನಾಡಿದ ಸ್ಟಾಲಿನ್‌, ‘ವಕ್ಫ್‌ ಆಸ್ತಿ ವಿಚಾರವಾಗಿ ಡಿಎಂಕೆ ಹೋರಾಡಲಿದ್ದು, ಜಯಶಾಲಿಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ತಮಿಳುನಾಡು ವಿಧಾನಸಭೆಯು ಮಾರ್ಚ್ 27ರಂದು ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ನಿರ್ಣಯವನ್ನು ಅಂಗೀಕರಿಸಿತ್ತು. ಈ ಮಸೂದೆ ಧಾರ್ಮಿಕ ಸಾಮರಸ್ಯವನ್ನು ಹಾಳುಗೆಡುವುದಲ್ಲದೇ, ಮುಸ್ಲಿಂ ಸಮುದಾಯದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ’ ಎಂದು ಸ್ಟಾಲಿನ್‌ ಸದನಕ್ಕೆ ಹೇಳಿದರು.

‘ದೇಶದ ಬಹುತೇಕ ರಾಜಕೀಯ ಪಕ್ಷಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದವು. ಆದರೂ, ಇದನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಮಸೂದೆ ಅಂಗೀಕಾರವಾದರೂ ಮಸೂದೆ ವಿರುದ್ಧ ಚಲಾವಣೆಯಾದ ಮತಗಳ ಸಂಖ್ಯೆಯನ್ನು ನಿರ್ಲಕ್ಷಿಸಬಾರದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.