ಸಾಂದರ್ಭಿಕ ಚಿತ್ರ
ಚೆನ್ನೈ: ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಜ್ಯವನ್ನು ಕಡೆಗಣಿಸಿರುವುದನ್ನು ಖಂಡಿಸಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ಫೆ.8ರಂದು ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನಾ ಸಭೆಗಳನ್ನು ನಡೆಸಲು ನಿರ್ಧರಿಸಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್‌ನಲ್ಲಿ ತಮಿಳುನಾಡಿನ ಬಗ್ಗೆ ಪಕ್ಷಪಾತ ಎಸಗಲಾಗಿದೆ ಮತ್ತು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಹಲವು ಬಾರಿ ಮನವಿ ಮಾಡಿದ್ದರೂ ಸಮಗ್ರ ಶಿಕ್ಷಣ ಅಭಿಯಾನ ಮತ್ತು ವಿಪತ್ತು ನಿರ್ವಹಣೆಗೆ ಅನುದಾನ ನೀಡಿಲ್ಲ ಎಂದು ಡಿಎಂಕೆ ಸೋಮವಾರ ಆರೋಪಿಸಿದೆ.
ಬಜೆಟ್ ಭಾಷಣದಲ್ಲಿ ಒಂದು ಬಾರಿಯೂ ತಮಿಳುನಾಡಿನ ಹೆಸರನ್ನು ಉಲ್ಲೇಖಿಸಿಲ್ಲ. ರಾಜ್ಯದ ಮೇಲಾಗಿರುವ ಅನ್ಯಾಯವನ್ನು ಖಂಡಿಸಲು ಪಕ್ಷದ ಎಲ್ಲ ಸಂಘಟನಾ ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಡಿಎಂಕೆಯ ಪ್ರಧಾನ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಿರಿಯ ಸಚಿವರು, ಸಂಸದರು ಮತ್ತು ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳನ್ನು ಸಭೆಗೆ ನಿಯೋಜಿಸಲಾಗಿದೆ ಎಂದು ಮೂಲಗಳು ಹೇಳಿವೆ.
ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸುವ ಅಧಿಕಾರವನ್ನು ರಾಜ್ಯಪಾಲರಿಗೆ ನೀಡುವ ಯುಜಿಸಿಯ ಕರಡು ನಿಯಮಗಳನ್ನು ವಿರೋಧಿಸಿ ಡಿಎಂಕೆಯ ವಿದ್ಯಾರ್ಥಿ ಘಟಕವು ದೆಹಲಿಯ ಜಂತರ್ ಮಂತರ್‌ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.