ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಚೆನ್ನೈನ ಕೊಳತ್ತೂರ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದ್ದು, ಎಐಎಡಿಎಂಕೆ ಮಾಜಿ ನಾಯಕ ತಂಗ ತಮಿಳ್‌ಸೆಲ್ವನ್ ಅವರನ್ನು ಉಪ ಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ವಿರುದ್ಧ ಕಣಕ್ಕಿಳಿಸಲಾಗಿದೆ. ಉದಯನಿಧಿ ಸ್ಟಾಲಿನ್ ಅವರು ಚೆಪಾಕ್–ತಿರುವಳ್ಳಿಕೇನಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಎಡಪ್ಪಾಡಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪಳನಿಸ್ವಾಮಿ ವಿರುದ್ಧ ಟಿ.ಸಂಪತ್ ಕುಮಾರ್ ಅವರನ್ನು ಡಿಎಂಕೆ ಕಣಕ್ಕಿಳಿಸಿದೆ.
ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೈ ಮುರುಗನ್ ಅವರನ್ನು ವೆಲ್ಲೂರ್ ಜಿಲ್ಲೆಯ ಕಟ್ಪಾಡಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.