ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅವಘಡದಲ್ಲಿ ಮೃತಪಟ್ಟವರ ಗುರುತು ಪತ್ತೆಗಾಗಿ ಡಿಎನ್‌ಎ ಪರೀಕ್ಷೆ ನಡೆಸಲಾಗುವುದು ಎಂದು ಗುಜರಾತ್ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಡಿಎನ್‌ಎ ಸಂಗ್ರಹಕ್ಕೆ ಅಹಮದಾಬಾದ್ ನಾಗರಿಕ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಮೃತರ ಪೋಷಕರು ಅಥವಾ ಮಕ್ಕಳು ಸೇರಿದಂತೆ ಹತ್ತಿರದ ಸಂಬಂಧಿಗಳು ಡಿಎನ್‌ಎ ಮಾದರಿಯನ್ನು ನೀಡಬಹುದು’ ಎಂದು ಆರೋಗ್ಯ ಇಲಾಖೆಯ ಕಾರ್ಯದರ್ಶಿ ಧನಂಜಯ್ ದ್ವಿವೇದಿ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.