ನವದೆಹಲಿ: ಖಾಸಗಿ ವೈದ್ಯಕೀಯ ಕಾಲೇಜೊಂದರ ಪರವಾಗಿ ನಕಲಿ ವರದಿ ತಯಾರಿಸಿಕೊಡಲು ₹10 ಲಕ್ಷ ಲಂಚ ಪಡೆದ ಆರೋಪದ ಮೇಲೆ ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಹಿರಿಯ ವೈದ್ಯರೊಬ್ಬರನ್ನು ಭಾನುವಾರ ಸಿಬಿಐ ಬಂಧಿಸಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಂಗರಚನಾ ಶಾಸ್ತ್ರ ವಿಭಾಗದ ಮುಖ್ಯಸ್ಥ ತಪನ್ ಕುಮಾರ್ ಅವರನ್ನು ಬೆಳಗಾವಿ ಮೂಲದ ಖಾಸಗಿ ವೈದ್ಯಕೀಯ ಕಾಲೇಜಿಗೆ ನಕಲಿ ವರದಿ ತಯಾರಿಸಿಕೊಟ್ಟ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದರು.
ʼಎನ್‌ಎಂಸಿʼಯ ಮೌಲ್ಯಮಾಪಕರಾಗಿಯೂ ಕಾರ್ಯನಿರ್ವಹಿಸುತ್ತಿರುವ ತಪನ್ ಕುಮಾರ್ ಅವರು ನಕಲಿ ವರದಿ ತಯಾರು ಮಾಡಿಕೊಡಲು ₹10 ಲಕ್ಷ ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದಿದ್ದಾರೆ.
ಕೋಲ್ಕತ್ತ ಹಾಗೂ ಬೆಳಗಾವಿಯಲ್ಲಿ ನಡೆದ ಸಿಬಿಐ ದಾಳಿಯ ವೇಳೆ ಸುಮಾರು ₹44.6 ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ತಪನ್ ಕುಮಾರ್ ಸೇರಿದಂತೆ ಮೂವರ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.