ADVERTISEMENT

ಹೈದರ್‌ಪೋರಾ ಎನ್‌ಕೌಂಟರ್‌: ತೀವ್ರ ಗಾಯಗೊಂಡಿದ್ದ ವೈದ್ಯ ಸಾವು

ಪಿಟಿಐ
Published 16 ನವೆಂಬರ್ 2021, 9:19 IST
Last Updated 16 ನವೆಂಬರ್ 2021, 9:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಇಲ್ಲಿನ ಹೈದರ್‌ಪೋರಾದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ ವೇಳೆ ತೀವ್ರವಾಗಿ ಗಾಯಗೊಂಡಿದ್ದ ದಂತವೈದ್ಯರೊಬ್ಬರುಮಂಗಳವಾರ ಮುಂಜಾನೆ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಸೋಮವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ದಂತ ಶಸ್ತ್ರಚಿಕಿತ್ಸಕ ಮುದಾಸಿರ್‌ ಗುಲ್‌ ಅವರು ಗಾಯಗೊಂಡಿದ್ದರು. ಎನ್‌ಕೌಂಟರ್‌ ವೇಳೆ ಇಬ್ಬರು ಉಗ್ರರು ಮತ್ತು ಒಬ್ಬ ಉಗ್ರನ ಸಹಚರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT