ADVERTISEMENT

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ: ಸಿಎಂ ಮಮತಾ ರಾಜೀನಾಮೆಗೆ ಬಿಜೆಪಿ ಆಗ್ರಹ

ಪಿಟಿಐ
Published 13 ಆಗಸ್ಟ್ 2024, 10:58 IST
Last Updated 13 ಆಗಸ್ಟ್ 2024, 10:58 IST
<div class="paragraphs"><p>ಅತ್ಯಾಚಾರ ಖಂಡಿಸಿ ಪ್ರತಿಭಟನೆ (ಸಾಂಕೇತಿಕ ಚಿತ್ರ)</p></div>

ಅತ್ಯಾಚಾರ ಖಂಡಿಸಿ ಪ್ರತಿಭಟನೆ (ಸಾಂಕೇತಿಕ ಚಿತ್ರ)

   

ಕೋಲ್ಕತ್ತ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರ ಸುರಕ್ಷತೆ ಮತ್ತು ಭದ್ರತೆ ಖಾತ್ರಿಪಡಿಸುವಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಫಲರಾಗಿದ್ದು ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಒತ್ತಾಯಿಸಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಆರೋಗ್ಯ ಮತ್ತು ಗೃಹ ಖಾತೆಗಳನ್ನು ಹೊಂದಿರುವ ಮಮತಾ ಬ್ಯಾನರ್ಜಿ ಅವರು ಈ ಘಟನೆ ಸಂಬಂಧ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ಈ ಘಟನೆ ಖಂಡಿಸಿ ಹಾಗೂ ಸರ್ಕಾರದ ವೈಪಲ್ಯ ಬಗ್ಗೆ ಬಿಜೆಪಿ ಶಾಸಕರು ಆಗಸ್ಟ್ 14ರಂದು ಕೋಲ್ಕತ್ತದಲ್ಲಿ ಧರಣಿ ನಡೆಸಲಿದ್ದಾರೆ ಎಂದು ಸುವೇಂದು ಅಧಿಕಾರಿ ಹೇಳಿದರು.

ಇದೇ ವೇಳೆ ಈ ಘಟನೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಅವರು ಆಗ್ರಹಿಸಿದರು. 

ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾಳದಾದ್ಯಂತ ಕಿರಿಯ ವೈದ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು. ಮೃತ ವೈದ್ಯೆಯ ಪೋಷಕರನ್ನು ಭೇಟಿ ಮಾಡಿದ ಮಮತಾ ಬ್ಯಾನರ್ಜಿ ಅವರಿಗೆ ಸಾಂತ್ವಾನ ಹೇಳಿದರು. ನಂತರ ಆಗಸ್ಟ್‌ 18ರ ಒಳಗೆ ಪ್ರಕರಣದ ಪ್ರಮುಖ ತಪ್ಪಿತಸ್ಥರನ್ನು ಬಂಧಿಸುವಂತೆ ಅವರು ಪೋಲಿಸರಿಗೆ ಖಡಕ್‌ ಸೂಚನೆ ಕೊಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.