ನವದೆಹಲಿ: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖಾ ಸಮಿತಿ ರಚಿಸುವಂತೆ ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ (ಎಫ್‌ಎಐಎಂಎ) ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಬುಧವಾರ ಪತ್ರ ಬರೆದು ಒತ್ತಾಯಿಸಿದೆ.
ಘಟನೆಯು ದೇಶದಲ್ಲಿನ ಮಕ್ಕಳ ಔಷಧ ಉತ್ಪಾದನೆ ಮತ್ತು ವಿತರಣೆ ಘಟಕಗಳ ಮೇಲ್ವಿಚಾರಣಾ ವ್ಯವಸ್ಥೆ, ಅವುಗಳ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಎಫ್‌ಎಐಎಂಎ ಹೇಳಿದೆ.
ಘಟನೆ ಕುರಿತ ವಿವರವಾದ ಮತ್ತು ನಿಷ್ಪಕ್ಷಪಾತ ತನಿಖೆಗೆ ಆರೋಗ್ಯ ಸಚಿವಾಲಯದ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸುವ ತನಿಖಾ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದೆ.
ತನಿಖೆ ಪಾರದರ್ಶಕವಾಗಿ, ಬಹುಶಿಸ್ತೀಯ ನೆಲೆಯಲ್ಲಿ ನಡೆಯಬೇಕು. ಇದಕ್ಕಾಗಿ ಸಮಿತಿಯು ವೈದ್ಯಕೀಯ ಮತ್ತು ಔಷಧ ತಜ್ಞರು, ಬೇರೆ ಬೇರೆ ರಾಜ್ಯಗಳ ಪ್ರತಿನಿಧಿಗಳನ್ನು ಒಳಗೊಂಡಿರಬೇಕು ಎಂದು ಅದು ಒತ್ತಾಯಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.