
ನವದೆಹಲಿ: ‘ಇತ್ತೀಚೆಗಿನ ದಿನಗಳಲ್ಲಿ ವೈದ್ಯರು ಹಾಗೂ ಎಂಜಿನಿಯರ್‌ಗಳು ತಮ್ಮ ವೃತ್ತಿ ನಿಭಾಯಿಸುವುದನ್ನು ಬಿಟ್ಟು ದೇಶವಿರೋಧಿ ಕೃತ್ಯಗಳಲ್ಲಿ ತೊಡಗುವುದನ್ನು ಪ್ರವೃತ್ತಿಯಾಗಿಸಿಕೊಂಡಿದ್ದಾರೆ’ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ಹೇಳಿದ್ದಾರೆ.
2020ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸಾಮಾಜಿಕ ಕಾರ್ಯಕರ್ತರಾದ ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಮತ್ತು ಇತರರು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯಲ್ಲಿ ದೆಹಲಿ ಪೊಲೀಸರ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಪೌರತ್ವ ತಿದ್ಧುಪಡಿ ಕಾಯ್ದೆ ವಿರುದ್ಧ ಇಮಾಮ್ ಅವರು ಮಾಡಿದ್ದಾರೆ ಎನ್ನಲಾದ ಪ್ರಚೋದನಕಾರಿ ಭಾಷಣಗಳ ವಿಡಿಯೊವನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ಹಾಗೂ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರಿದ್ದ ಪೀಠದ ಎದುರು ವಕೀಲರು ಪ್ರಸ್ತುತಪಡಿಸಿದ್ದಾರೆ. ಜತೆಗೆ ಇಮಾಮ್ ಒಬ್ಬ ಎಂಜಿನಿಯರಿಂಗ್ ಪದವೀಧರ ಎಂಬುದನ್ನು ಉಲ್ಲೇಖಿಸಿ ಈ ಹೇಳಿಕೆ ನೀಡಿದ್ದಾರೆ.
ಜತೆಗೆ ಇದು ಬರೀ ಪ್ರತಿಭಟನೆ ಅಲ್ಲ, ಹಿಂಸಾತ್ಮಕ ಪ್ರತಿಭಟನೆ ಎಂದೂ ವಕೀಲರು ಪ್ರತಿಪಾದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.