ADVERTISEMENT

ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಕೊಲೆ: ಸಿಬಿಐಗೆ ಶಂಕಿತರ ಮಾಹಿತಿ ನೀಡಿದ ಪೋಷಕರು

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2024, 15:35 IST
Last Updated 16 ಆಗಸ್ಟ್ 2024, 15:35 IST
<div class="paragraphs"><p>ಕೊಲ್ಕತ್ತದ ಆರ್‌.ಜಿ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ</p></div>

ಕೊಲ್ಕತ್ತದ ಆರ್‌.ಜಿ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

   

ಪಿಟಿಐ

ಕೋಲ್ಕತ್ತ: ‘ಮಗಳ ಮೇಲಿನ ಅತ್ಯಾಚಾರ ಮತ್ತು ಕೊಲೆ ಕೃತ್ಯದಲ್ಲಿ ಆರ್‌.ಜೆ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕೆಲ ಇಂಟರ್ನಿಗಳು ಮತ್ತು ವೈದ್ಯರು ಭಾಗಿರುವ ಸಾಧ್ಯತೆ ಇದೆ’ ಎಂದು ಸಂತ್ರಸ್ತೆಯ ಪೋಷಕರು ಸಿಬಿಐಗೆ ತಿಳಿಸಿದ್ದಾರೆ.

ADVERTISEMENT

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಶಂಕಿತ ವ್ಯಕ್ತಿಗಳ ಹೆಸರನ್ನೂ ಪೋಷಕರು ನೀಡಿದ್ದಾರೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.

‘ಕೆಲ ವೈದ್ಯರು ಮತ್ತು ಕೋಲ್ಕತ್ತ ಪೊಲೀಸ್ ಅಧಿಕಾರಿಗಳನ್ನು ಪ್ರಶ್ನಿಸಬೇಕಿದೆ. ಈ ಸಂಬಂಧ ನಮ್ಮ ಬಳಿ 30 ಜನರ ಹೆಸರುಗಳಿದ್ದು, ಈಗಾಗಲೇ ಪ್ರಶ್ನಿಸುವ ಕಾರ್ಯ ಆರಂಭಿಸಿದ್ದೇವೆ’ ಎಂದು ಅವರು ಹೇಳಿದ್ದಾರೆ.

ವೈದ್ಯ ವಿದ್ಯಾರ್ಥಿನಿಯ ಕೊಲೆಯಾದ ದಿನ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಸ್ನಾತಕೋತ್ತರ ಟ್ರೈನಿ ಮತ್ತು ಒಬ್ಬರು ವೈದ್ಯರನ್ನು ವಿಚಾರಣೆಗೆ ಒಳಪಡಿಸಿದ್ದರು.

ಈ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿಯನ್ನು ಸಿಬಿಐ ತಂಡ ಶುಕ್ರವಾರ ಆಸ್ಪತ್ರೆಗೆ ಕರೆತಂದು, ಅಪರಾಧದ ಸನ್ನಿವೇಶವನ್ನು ಮರುಸೃಷ್ಟಿಸಿದರು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.