ನವದೆಹಲಿ: ಪೋಕ್ಸೊ ಕಾಯ್ದೆ ಹಾಗೂ ತಕ್ಷಣ ಬಂಧನದಂತಹ ಕ್ರಮಗಳು ಡಬ್ಲ್ಯುಎಫ್ಐನ ನಿರ್ಗಮಿತ ಅಧ್ಯಕ್ಷ ಬ್ರಿಜ್ಭೂಷಣ್ ಸಿಂಗ್ ಅವರನ್ನು ಬಿಟ್ಟು ಉಳಿದ ಎಲ್ಲ ಆರೋಪಿಗಳಿಗೆ ಮಾತ್ರ ಅನ್ವಯವಾಗುತ್ತವೆಯೇ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಬುಧವಾರ ಪ್ರಶ್ನಿಸಿದ್ದಾರೆ.
ಈ ಕುರಿತು ಅವರು ಟ್ವೀಟ್ ಮಾಡಿದ್ದು, ‘ಖ್ಯಾತನಾಮರಾದ ಕುಸ್ತಿಪಟುಗಳಿಗಿಂತ ಮತಗಳೇ ಮುಖ್ಯವಾಗಿವೆ ಹಾಗೂ ಈ ಪ್ರಕರಣದ ಬಗ್ಗೆ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ. ಇದು ನನ್ನ ನವ ಭಾರತವೇ?’ ಎಂದಿದ್ದಾರೆ.
ಸಿಬಲ್ ಅವರು ಸುಪ್ರೀಂಕೋರ್ಟ್ನಲ್ಲಿ ಕುಸ್ತಿಪಟುಗಳ ಪರ ವಾದ ಮಂಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.