ADVERTISEMENT

ಮಹಾರಾಷ್ಟ್ರ: ಒಂದೇ ದಿನದಲ್ಲಿ 67 ಮಂದಿಗೆ ನಾಯಿ ಕಡಿತ

ಪಿಟಿಐ
Published 14 ಸೆಪ್ಟೆಂಬರ್ 2025, 6:35 IST
Last Updated 14 ಸೆಪ್ಟೆಂಬರ್ 2025, 6:35 IST
   

ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಕಲ್ಯಾಣ ಮತ್ತು ಡೊಂಬಿವ್ಲಿ ಪ್ರದೇಶದ ವ್ಯಾಪ್ತಿಯಲ್ಲಿ ಒಂದೇ ದಿನದಲ್ಲಿ 67 ಮಂದಿ ಬೀದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ಇದು ಇಲ್ಲಿನ ನಿವಾಸಿಗಳಲ್ಲಿ ಆತಂಕವನ್ನುಂಟುಮಾಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಕಳೆದ ಕೆಲವು ವಾರಗಳಿಂದ, ಈ ಪ್ರದೇಶದಲ್ಲಿ ನಾಯಿ ಕಡಿತದ ಘಟನೆಗಳು ವಿರಳವಾಗಿ ಸಂಭವಿಸುತ್ತಿದ್ದವು. ಆದರೆ ಶನಿವಾರ ಕಲ್ಯಾಣ ಮತ್ತು ಡೊಂಬಿವ್ಲಿ ಪಟ್ಟಣಗಳಲ್ಲಿ ಒಟ್ಟು 67 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಅಧಿಕಾರಿ ಡಾ. ದೀಪಾ ಶುಕ್ಲಾ ತಿಳಿಸಿದ್ದಾರೆ.

ಕಲ್ಯಾಣ, ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಕೆಡಿಎಂಸಿ) ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಈ ಘಟನೆಗಳಿಗೆ ಕಾರಣವಾಗಿದೆ. ನಾಯಿ ಕಡಿತಕ್ಕೆ ಒಳಗಾದವರಿಗೆ ರೇಬೀಸ್ ನಿರೋಧಕ ಲಸಿಕೆ ಸೇರಿದಂತೆ ಸೂಕ್ತ ಚಿಕಿತ್ಸೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಕೆಡಿಎಂಸಿ ನಿಯಮಿತವಾಗಿ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸುತ್ತಿದೆ. ಪ್ರತಿ ತಿಂಗಳು 1,000 ರಿಂದ 1,100 ನಾಯಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.