ADVERTISEMENT

ಮೇ 25ರಿಂದ ದೇಶೀಯ ವಿಮಾನ ಹಾರಾಟ ಪ್ರಾರಂಭ: ವಿಮಾನಯಾನ ಸಚಿವಾಲಯ

​ಪ್ರಜಾವಾಣಿ ವಾರ್ತೆ
Published 20 ಮೇ 2020, 12:38 IST
Last Updated 20 ಮೇ 2020, 12:38 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಮುಂದಿನ ವಾರದಲ್ಲಿ ದೇಶೀಯವಿಮಾನ ಸಂಚಾರ ಆರಂಭವಾಗುವುದು ಎಂದು ಕೇಂದ್ರ ವಿಮಾನಯಾನ ಸಚಿವಾಲಯ ಬುಧವಾರ ತಿಳಿಸಿದೆ.

ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಅನುಸರಿಸಿ ಮೇ 25(ಸೋಮವಾರ)ರಿಂದ ದೇಶಿಯವಾಗಿ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಗುವುದು ಎಂದುಸಚಿವಾಲಯ ಘೋಷಿಸಿದೆ.

ಈ ಕುರಿತು ನಾಗರಿಕ ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್‌ ಪುರಿ ಟ್ವೀಟ್ ಮಾಡಿದ್ದಾರೆ. ಈಗಾಗಲೇ ಎಲ್ಲಾ ಖಾಸಗಿ ವಿಮಾನಯಾನ ಸಂಸ್ಥೆಗಳಿಗೂ ಸಂದೇಶ ರವಾನಿಸಲಾಗಿದೆ, ಮೇ.25ರಿಂದ ವಿಮಾನ ಹಾರಾಟ ಆರಂಭಿಸುವಂತೆ ಸೂಚಿಸಲಾಗಿದೆ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ADVERTISEMENT

ಕೊರೊನಾ ವೈರಸ್ ಹರಡುವುದನ್ನು ತಡೆಯಲು ದೇಶದಲ್ಲಿ ಲಾಕ್‌ಡೌನ್ ವಿಧಿಸಲಾಗಿತ್ತು. ಇದರ ಪರಿಣಾಮವಾಗಿ ದೇಶೀಯ, ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಇದೀಗ ದೇಶೀಯವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ವಿಮಾನಯಾನ ಸಚಿವಾಲಯ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.