ADVERTISEMENT

ಹಿಂದೂ ವಿವಾಹ ಕಾಯ್ದೆಯಡಿ ಸಲಿಂಗ ವಿವಾಹಕ್ಕೆ ಅವಕಾಶ ಬೇಡ: ಹೈಕೋರ್ಟ್‌ಗೆ ಅರ್ಜಿ

ದೆಹಲಿ ಹೈಕೋರ್ಟ್‌ಗೆ ಮನವಿ ಸಲ್ಲಿಕೆ

ಪಿಟಿಐ
Published 3 ಡಿಸೆಂಬರ್ 2021, 12:33 IST
Last Updated 3 ಡಿಸೆಂಬರ್ 2021, 12:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಹಿಂದೂ ಧರ್ಮದಲ್ಲಿ ಅನಾದಿ ಕಾಲದಿಂದಲೂ ಸ್ತ್ರೀ ಮತ್ತು ಪುರುಷನ ನಡುವೆ ವಿವಾಹದ ಗಂಟು ಹಾಕಲು ಅವಕಾಶವಿರುವುದರಿಂದ ಹಿಂದೂ ವಿವಾಹ ಕಾಯ್ದೆಯಡಿ ಸಲಿಂಗ ವಿವಾಹ ನಡೆಸಲು ಅನುಮತಿ ನೀಡಬಾರದು ಎಂದು ಮನವಿ ಮಾಡಿ ದೆಹಲಿ ಹೈಕೋರ್ಟ್‌ನಲ್ಲಿ ಶುಕ್ರವಾರ ಅರ್ಜಿಯೊಂದು ಸಲ್ಲಿಕೆಯಾಗಿದೆ.

‘ಹಿಂದೂಗಳಲ್ಲಿನ ವಿವಾಹವು ಅವರ ಧರ್ಮದ ಭಾಗವಾಗಿದೆ. ಇದರ ಧಾರ್ಮಿಕ ಆಚರಣೆಗಳು ಸಮಾಜದಲ್ಲಿ ಭಾವನಾತ್ಮಕ ಮೌಲ್ಯಗಳನ್ನು ಹೊಂದಿವೆ’ ಎಂದು ಅರ್ಜಿ ಹೇಳಿದೆ.

ಸೇವಾ ನ್ಯಾಯ ಉತ್ಥಾನ ಫೌಂಡೇಷನ್‌ ಸಂಸ್ಥೆಯು ಸಲ್ಲಿಸಿದ ಅರ್ಜಿಯನ್ನು ಫೆಬ್ರವರಿ 3 ರಂದು ಸಲಿಂಗ ವಿವಾಹಗಳನ್ನು ಅಂಗೀಕರಿಸುವ ಮುಖ್ಯ ಅರ್ಜಿ ಜೊತೆ ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಡಿ.ಎನ್‌.ಪಟೇಲ್‌ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ಪೀಠವು ಪಟ್ಟಿ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.