ಡೆಹ್ರಾಡೂನ್: ವಿಷ್ಣುವಿನ 11ನೇ ‘ಅವತಾರ’ ಎಂಬಂತೆ ಬಿಂಬಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿನ ಶಾಲೆಯೊಂದರಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ಧರ್ಮದ ಹೆಸರಿನಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿಗೆ ಬಿಡಬಾರದು. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು’ ಎಂದರು.
ಯಾರೇ ಟಿ.ವಿ ಹಾಕಿದರೂ, ಮೋದಿ ಅವರೇ ಕಾಣಿಸಿಕೊಳ್ಳುತ್ತಾರೆ. ಮೋದಿ ಅವರು ವಿಷ್ಣುವಿನ 11ನೇ ಅವತಾರ ಆಗಲು ಯತ್ನಿಸುತ್ತಿದ್ದಾರೆ. ದೇಶಕ್ಕಾಗಿ ಕಾಂಗ್ರೆಸ್ ನಾಯಕರು ಪ್ರಾಣ ಅರ್ಪಿಸಿದ್ದಾರೆ. ಆದರೆ, ಬಿಜೆಪಿ ಇಂಥ ಯಾವುದೇ ತ್ಯಾಗ ಮಾಡಿಲ್ಲ ಎಂದು ಟೀಕಿಸಿದರು.
‘ದೇಶ ಒಗ್ಗೂಡಿಸಲು ಇಂದಿರಾಗಾಂಧಿ ಮತ್ತು ರಾಜೀವ್‌ಗಾಂಧಿ ತಮ್ಮ ಪ್ರಾಣವನ್ನೇ ಬಲಿಕೊಟ್ಟರು. ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿ ಮತ್ತು ಪಂಡಿತ್ ಜವಾಹರಲಾಲ್ ನೆಹರೂ ಹಲವು ವರ್ಷಗಳ ಕಾಲ ಸೆರೆವಾಸ ಅನುಭವಿಸಿದರು. ಬಿಜೆಪಿ ಏನು ಮಾಡಿದೆ’ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.