ADVERTISEMENT

ಗೆಳೆಯರಿಗಾಗಿ ಆಸ್ತಿ ಸಂಪಾದಿಸುವುದನ್ನು ನಿಲ್ಲಿಸಿ: ರಾಹುಲ್ ವಾಗ್ದಾಳಿ

ಪಿಟಿಐ
Published 17 ನವೆಂಬರ್ 2021, 13:46 IST
Last Updated 17 ನವೆಂಬರ್ 2021, 13:46 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಗೆಳೆಯರಿಗಾಗಿ ಹೆಚ್ಚು ಆಸ್ತಿ ಸಂಪಾದಿಸುವುದನ್ನು ನಿಲ್ಲಿಸಿ, ಜನರಿಗಾಗಿ ಸರಿಯಾದ ನೀತಿಗಳನ್ನು ಜಾರಿಗೊಳಿಸಿ ಎಂದು ಹೇಳಿದ್ದಾರೆ.

ಜನರ ಹಸಿವು ನೀಗಿಸುವುದಕ್ಕೆ ಸಮುದಾಯ ಭೋಜನಾಲಯಗಳನ್ನು (ಕ್ಯಾಂಟೀನ್‌) ಆರಂಭಿಸುವಲ್ಲಿ ಕೇಂದ್ರ ಸರ್ಕಾರ ವಿಫಲಗೊಂಡಿದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಈ ವರದಿಯನ್ನು ಉಲ್ಲೇಖ ಮಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ಗೆಳೆಯರಿಗಾಗಿ ಹೆಚ್ಚು ಸಂಪಾದಿಸುವುದನ್ನು ನಿಲ್ಲಿಸಿ, ಜನರಿಗಾಗಿ ಸರಿಯಾದ ನೀತಿಗಳನ್ನು ಜಾರಿಗೊಳಿಸಿ' ಎಂದು ಹೇಳಿದ್ದಾರೆ.

ADVERTISEMENT

ಜನರು ಹಸಿವಿನಿಂದ ಸಾಯದಂತೆ ನೋಡಿಕೊಳ್ಳುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಯಾವುದೇ ಸರ್ಕಾರದ ಮೊದಲ ಹೊಣೆಗಾರಿಕೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.