ADVERTISEMENT

ರಾಷ್ಟ್ರೀಯ ವೈದ್ಯಕೀಯ ಆಯೋಗ: 14ರಂದು ಸದಸ್ಯರ ಆಯ್ಕೆ

ಪಿಟಿಐ
Published 5 ಅಕ್ಟೋಬರ್ 2019, 19:47 IST
Last Updated 5 ಅಕ್ಟೋಬರ್ 2019, 19:47 IST

ನವದೆಹಲಿ : ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಸದಸ್ಯರ ಆಯ್ಕೆ ಪ್ರಕ್ರಿಯೆ ಅ. 14ರಂದು ನಡೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ತಿಳಿಸಿದ್ದಾರೆ.

ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ರಾಜ್ಯ ವೈದ್ಯಕೀಯ ಮಂಡಳಿಗಳಿಂದ ನಾಮ ನಿರ್ದೇಶನಗೊಂಡ ಅಭ್ಯರ್ಥಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಅವರು ಆಯೋಗದ ಸದಸ್ಯರಾಗಲಿದ್ದಾರೆ. ಆಯೋಗ ರಚನೆಯಾದ ದಿನವೇ ರಾಷ್ಟ್ರೀಯ ವೈದ್ಯಕೀಯ ಮಂಡಳಿ(ಎಂಸಿಐ) ಅಸ್ತಿತ್ವದಲ್ಲಿ ಇರುವುದಿಲ್ಲ ಎಂದು ಹೇಳಿದ್ದಾರೆ.

ಭಾರತೀಯ ವೈದ್ಯಕೀಯ ಮಂಡಳಿ ಕಾಯ್ದೆ ಅನ್ವಯ ‘ಎಂಸಿಐ’ ಅನ್ನು ಬರ್ಖಾಸ್ತುಗೊಳಿಸಲಾಗಿದೆ. 2017ರಲ್ಲಿ ಈ ಕಾಯ್ದೆ ಜಾರಿಯಾಗಿದ್ದು, ಅದರ ಅನ್ವಯ ಬೋರ್ಡ್‌ ಆಫ್‌ ಗವರ್ನರ್ಸ್‌ ಅನ್ನು ರಚಿಸಲಾಗಿದೆ. ವೈದ್ಯಕೀಯ ಶಿಕ್ಷಣ, ವೃತ್ತಿಪರತೆ ಮತ್ತು ಸಂಸ್ಥೆಗಳಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಲು ಈ ನೂತನ ಆಯೋಗವನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.