ಡ್ರೋನ್ ಮೂಲಕ ದಾಳಿ ನಡೆಸುವ ಕ್ಷಿಪಣಿ ಪರೀಕ್ಷೆ ಯಶಸ್ವಿ
ನವದೆಹಲಿ: ಡ್ರೋನ್ ಮೂಲಕ ದಾಳಿ ನಡೆಸಬಹುದಾದ ನಿಖರ ನಿರ್ದೇಶಿತ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವು ಆಂಧ್ರ ಪ್ರದೇಶದ ಕರ್ನೂಲ್‌ನಲ್ಲಿ ಯಶಸ್ವಿಯಾಗಿ ಶುಕ್ರವಾರ ನಡೆಯಿತು.
ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ‘ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ನೇತೃತ್ವದಲ್ಲಿ ಯುಎಲ್‌ಪಿಜಿಎಂ–ವಿ3 ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ಇದರಿಂದ ರಕ್ಷಣಾ ವಲಯದಲ್ಲಿ ಭಾರತದ ಸಾಮರ್ಥ್ಯವು ಇಮ್ಮಡಿಗೊಂಡಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.