ADVERTISEMENT

ಗುಜರಾತ್‌ನಲ್ಲಿ ಕನಸುಗಳ ಮಾರಾಟಗಾರರು ಗೆಲ್ಲುವುದಿಲ್ಲ: ಎಎಪಿ ವಿರುದ್ಧ ಅಮಿತ್ ಶಾ

ಪಿಟಿಐ
Published 13 ಸೆಪ್ಟೆಂಬರ್ 2022, 12:22 IST
Last Updated 13 ಸೆಪ್ಟೆಂಬರ್ 2022, 12:22 IST
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌, ಕೇಂದ್ರ ಗೃಹ ಸಚಿವ ಅಮಿತ್‌ ಶಾ
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌, ಕೇಂದ್ರ ಗೃಹ ಸಚಿವ ಅಮಿತ್‌ ಶಾ   

ಅಹಮದಾಬಾದ್‌: ಗುಜರಾತ್‌ನಲ್ಲಿ ಕನಸುಗಳ ಮಾರಾಟಗಾರರು ಎಂದಿಗೂ ಗೆಲ್ಲಲಾರರು ಎಂದು ಕೇಂದ್ರ ಗೃಹ ಸಚಿವ ಅಮಿಶ್‌ ಶಾ ಅವರು ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಮೂರನೇ ಎರಡರಷ್ಟು ಬಹುಮತದೊಂದಿಗೆ ಬಿಜೆಪಿ ಪುನಃ ಅಧಿಕಾರಕ್ಕೆ ಬರಲಿದೆ ಎಂದರು.

ಗುಜರಾತ್‌ನಲ್ಲಿ ಕನಸುಗಳನ್ನು ಮಾರಾಟ ಮಾಡುವ ಮೂಲಕ ಗೆಲ್ಲಲು ಸಾಧ್ಯವಿಲ್ಲ. ನನಗೆ ಗುಜರಾತ್‌ನ ಜನರ ಬಗ್ಗೆ ಗೊತ್ತಿದೆ. ಕೆಲಸ ಮಾಡುವವರನ್ನಷ್ಟೇ ಗುಜರಾತ್‌ ಜನ ನಂಬುತ್ತಾರೆ. ಹಾಗಾಗಿ ಜನರು ಬಿಜೆಪಿ ಪರವಾಗಿ ಇದ್ದಾರೆ.

ADVERTISEMENT

ಗುಜರಾತ್‌ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್‌ ಅವರು ಒಂದು ವರ್ಷ ಪೂರೈಸಿದ ಹಿನ್ನೆಲೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಮಿತ್‌ ಶಾ, ಭೂಪೇಂದ್ರ ಪಟೇಲ್‌ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಬಿಜೆಪಿ ದೊಡ್ಡ ಜಯವನ್ನು ಸಂಭ್ರಮಿಸುವ ದಾರಿಯಲ್ಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಭೂಪೇಂದ್ರ ಪಟೇಲ್‌ ಅವರ ನಾಯಕತ್ವವನ್ನು ಗುಜರಾತ್‌ನ ಜನ ಮೆಚ್ಚಿಕೊಂಡಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.