ADVERTISEMENT

ಸಾಂಬಾ, ಜಲಂಧರ್‌ ಗಡಿಯಲ್ಲಿ ಡ್ರೋನ್‌ ದಾಳಿ: ಹೊಡೆದುರುಳಿಸಿದ ಭಾರತೀಯ ಸೇನೆ

ಪಿಟಿಐ
Published 13 ಮೇ 2025, 2:48 IST
Last Updated 13 ಮೇ 2025, 2:48 IST
<div class="paragraphs"><p> ಡ್ರೋನ್‌ಗಳನ್ನು ಹೊಡೆದುರುಳಿಸಿದ  ಸೇನೆ</p></div>

ಡ್ರೋನ್‌ಗಳನ್ನು ಹೊಡೆದುರುಳಿಸಿದ ಸೇನೆ

   

ರಾಯಿಟರ್ಸ್‌ ಚಿತ್ರ

ಜಮ್ಮು/ ಚಂಡೀಗಢ: ಸಾಂಬಾ ಜಿಲ್ಲೆಯ ಗಡಿ ಪ್ರದೇಶದಲ್ಲಿ ಸೋಮವಾರ ಡ್ರೋನ್‌ಗಳು ಕಾಣಿಸಿಕೊಂಡಿದ್ದು, ಭದ್ರತಾ ಪಡೆಗಳು ಅವುಗಳನ್ನು ನಿಷ್ಕ್ರಿಯಗೊಳಿಸಿವೆ.

ADVERTISEMENT

ಪಂಜಾಬ್‌ನ ಜಲಂಧರ್‌ನಲ್ಲಿ ಬೇಹುಗಾರಿಕಾ ಡ್ರೋನ್‌ವೊಂದನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. 

ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಿದ ಸ್ವಲ್ಪ ಸಮಯದ ನಂತರ ಡ್ರೋನ್‌ ದಾಳಿ ನಡೆದಿದೆ ರಕ್ಷಣಾ ಇಲಾಖೆಯ ವಕ್ತಾರರು ಹೇಳಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಸಾಂಬಾ, ಕಠುವಾ, ರಾಜೌರಿ ಹಾಗೂ ಜಮ್ಮುವಿನಲ್ಲಿ ಬ್ಲ್ಯಾಕ್‌ಔಟ್‌ ಮಾಡಲಾಯಿತು.

ಮಾತಾ ವೈಷ್ಣೋದೇವಿ ಗುಹಾಂತರ ದೇವಾಲಯದ ಬಳಿಯೂ ವಿದ್ಯುತ್ ದೀಪಗಳನ್ನು ಆರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.