
ಕ್ಷಿಪಣಿ
ಎಕ್ಸ್ ಚಿತ್ರ
ನವದೆಹಲಿ: ಡ್ರೋನ್‌ನಿಂದ ಉಡಾಯಿಸಬಹುದಾದ ಗುರಿ ನಿರ್ದೇಶಿತ ಕ್ಷಿಪಣಿಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಆಂಧ್ರ ಪ್ರದೇಶದಲ್ಲಿ ಪರೀಕ್ಷಾರ್ಥ ಉಡಾವಣೆ ನಡೆಸಿದೆ.
ಕರ್ನೂಲ್‌ನಲ್ಲಿ ಶುಕ್ರವಾರ ಪರೀಕ್ಷೆ ನಡೆಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
‘ಭಾರತದ ರಕ್ಷಣಾ ಸಾಮರ್ಥ್ಯಗಳಿಗೆ ಪ್ರಮುಖ ಉತ್ತೇಜನವಾಗಿ, ಆಂಧ್ರಪ್ರದೇಶದ ಕರ್ನೂಲ್‌ನಲ್ಲಿರುವ ರಾಷ್ಟ್ರೀಯ ಮುಕ್ತ ಪ್ರದೇಶ ಶ್ರೇಣಿ ಪರೀಕ್ಷಾ ಶ್ರೇಣಿಯಲ್ಲಿ ಡಿಆರ್‌ಡಿಒ ಯುಎವಿ ಉಡಾವಣಾ ಗುರಿ ನಿರ್ದೇಶಿತ ಕ್ಷಿಪಣಿ (ULPGM)-V3)ಯ ಹಾರಾಟದ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿದೆ’ ಎಂದು ಅವರು ಬರೆದುಕೊಂಡಿದ್ದಾರೆ.
ULPGM-V3 ವ್ಯವಸ್ಥೆಯ ಅಭಿವೃದ್ಧಿ ಮತ್ತು ಯಶಸ್ವಿ ಪ್ರಯೋಗಗಳಿಗಾಗಿ ಡಿಆರ್‌ಡಿಒ ಮತ್ತು ಉದ್ಯಮ ಪಾಲುದಾರರು, ಸ್ಟಾರ್ಟ್-ಅಪ್‌ಗಳಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.