ADVERTISEMENT

ಒಡಿಶಾ | ಪುರಿ ಜಗನ್ನಾಥ ದೇವಾಲಯದ ಮೇಲೆ ಡ್ರೋನ್ ಹಾರಾಟ: ತನಿಖಾ ತಂಡ ರಚನೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2025, 11:01 IST
Last Updated 5 ಜನವರಿ 2025, 11:01 IST
<div class="paragraphs"><p>ಪುರಿ ಜಗನ್ನಾಥ ದೇವಾಲಯ</p></div>

ಪುರಿ ಜಗನ್ನಾಥ ದೇವಾಲಯ

   

ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ದೇವಾಲಯದ ಮೇಲೆ ಇಂದು (ಭಾನುವಾರ) ಮುಂಜಾನೆ ಡ್ರೋನ್ ಹಾರಾಟ ನಡೆಸಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಮುಂಜಾನೆ 4.10ರ ವೇಳೆಗೆ ಜಗನ್ನಾಥನ ದೇವಸ್ಥಾನದ ಮೇಲೆ ಸುಮಾರು ಅರ್ಧ ಗಂಟೆಗಳ ಕಾಲ ಡ್ರೋನ್‌ ಹಾರಾಟ ನಡೆಸಿದೆ. ಇದರಿಂದ ಕೆಲ ಕಾಲ ಆತಂಕದ ಪರಿಸ್ಥಿತಿ ಎದುರಾಗಿತ್ತು. ಈ ಬಗ್ಗೆ ಎಚ್ಚೆತ್ತ ಪೊಲೀಸರು ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲನೆ ನಡೆಸಿ, ಬಿಗಿ ಬಂದೋಬಸ್ತ್‌ ಒದಗಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ADVERTISEMENT

'ದೇವಸ್ಥಾನದ ಮೇಲೆ ಡ್ರೋನ್ ಹಾರಾಟ ನಡೆಸುವುದು ಕಾನೂನುಬಾಹಿರ ಹಾಗೂ ಸ್ವೀಕಾರಾರ್ಹವಲ್ಲ. ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಕಾನೂನು ಸಚಿವ ಪೃಥ್ವಿರಾಜ್ ಹರಿಚಂದನ್ ಎಂದು ಹೇಳಿದ್ದಾರೆ.

'ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಲಾಗುವುದು. ದೇವಸ್ಥಾನದ ಸುತ್ತಲಿನ ನಾಲ್ಕು ಕಾವಲು ಗೋಪುರಗಳ ಬಳಿ ಭದ್ರತೆಯನ್ನು ಹೆಚ್ಚಿಸಲಾಗವುದು' ಎಂದು ಹರಿಚಂದನ್ ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ವಿಶೇಷ ತನಿಖಾ ತಂಡ ರಚಿಸಲಾಗಿದೆ. 'ಯಾರೋ ವ್ಲಾಗರ್ ಡ್ರೋನ್ ಅನ್ನು ದೇವಸ್ಥಾನದ ಮೇಲೆ ಹಾರಿಸಿರಬಹುದು ಎಂದು ಶಂಕಿಸಲಾಗಿದೆ. ಆದರೆ ಇದರ ಹಿಂದಿನ ಉದ್ದೇಶವನ್ನು ತಳ್ಳಿಹಾಕುವಂತಿಲ್ಲ' ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.