ADVERTISEMENT

ಜಮ್ಮು ಹೊರವಲಯದಲ್ಲಿ ಡ್ರೋನ್ ವಶಪಡಿಸಿಕೊಂಡ ಪೊಲೀಸರು

ಪಿಟಿಐ
Published 13 ಫೆಬ್ರುವರಿ 2023, 7:36 IST
Last Updated 13 ಫೆಬ್ರುವರಿ 2023, 7:36 IST
ಡ್ರೋನ್‌
ಡ್ರೋನ್‌   

ಶ್ರೀನಗರ: ಜಮ್ಮು ನಗರದ ಹೊರವಲಯದಲ್ಲಿ ಹಾರಾಡುತ್ತಿದ್ದ ಡ್ರೋನ್‌ವೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಲ್ಲಿನ ಬಿಶ್ನಾ ಪಟ್ಟಣದ ಬಾಂದ್ರಾಲಿ ಗ್ರಾಮದ ಹೊರವಲಯದಲ್ಲಿ ಭಾನುವಾರ ತಡರಾತ್ರಿ ಡ್ರೋನ್ ಹಾರಾಡುತ್ತಿರುವುದನ್ನು ಗ್ರಾಮಸ್ಥರು ಗಮನಿಸಿದ್ದಾರೆ. ಕೂಡಲೇ ಪೊಲೀಸ್‌ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಅಧಿಕಾರಿಗಳು ಡ್ರೋನ್‌ ವಶಪಡಿಸಿಕೊಂಡಿದ್ದಾರೆ. ಡ್ರೋನ್‌ ಹಾರಾಡುತ್ತಿರುವ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಉಂಟಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ಮದುವೆ ಸಮಾರಂಭವನ್ನು ಚಿತ್ರೀಕರಿಸಲು ಡ್ರೋನ್‌ ಬಳಕೆ ಮಾಡಲಾಗುತ್ತಿತ್ತು ಎಂಬುದು ಪ್ರಾಥಮಿಕ ತನಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆ ಕುರಿತಂತೆ ಇನ್ನು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಬಿಶ್ನಾ ಪೊಲೀಸ್ ಠಾಣೆಯ ಅಧಿಕಾರಿ ವಿಕ್ರಮ್ ಶರ್ಮಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.