ADVERTISEMENT

ಪೂಂಚ್‌: ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನಿ ಡ್ರೋನ್‌ ಪತ್ತೆ

ಪಿಟಿಐ
Published 22 ನವೆಂಬರ್ 2020, 9:02 IST
Last Updated 22 ನವೆಂಬರ್ 2020, 9:02 IST
ಸಾಂದರ್ಭಿಕ ಚಿತ್ರ                                                                                         –ಎಎಫ್‌ಪಿ ಚಿತ್ರ
ಸಾಂದರ್ಭಿಕ ಚಿತ್ರ                                                                                         –ಎಎಫ್‌ಪಿ ಚಿತ್ರ   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಮೆಂಧರ್ ವಲಯದ ಗಡಿ ನಿಯಂತ್ರಣ ರೇಖೆ ಬಳಿಯೂ ಪಾಕಿಸ್ತಾನಿ ಡ್ರೋನ್‌ ಹಾರಾಡುತ್ತಿರುವುದು ಪತ್ತೆಯಾಗಿದ್ದು, ತಕ್ಷಣವೇ ಡ್ರೋನ್‌ ಪತ್ತೆಗಾಗಿ ಶೋಧ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.

ಗಡಿ ನಿಯಂತ್ರಣ ರೇಖೆಯ ಬಳಿಶನಿವಾರ ಸಂಜೆ ಡ್ರೋನ್‌ ಹಾರಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣವೇ ಬಾಸೋನಿ, ಧರಣಾ ಮತ್ತು ಪಕ್ಕದ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕಳೆದ ಆರು ತಿಂಗಳಲ್ಲಿ ಎಲ್‌ಓಸಿ ಮತ್ತು ಅಂತರರಾಷ್ಟ್ರೀಯ ಗಡಿ ಭಾಗಗಳಲ್ಲಿ ಪಾಕಿಸ್ತಾನದ ಡ್ರೋನ್‌ ಹಾರಾಟಗಳು ಹೆಚ್ಚಾಗಿವೆ. ಡ್ರೋನ್‌ ಮೂಲಕ ಪಾಕ್‌ ಗಡಿಯಿಂದಾಚೆಗೆ ಮಾದಕ ವಸ್ತು, ಶಸ್ತ್ರಾಸ್ತ್ರಗಳನ್ನು ರವಾನೆ ಮಾಡುತ್ತಿದೆ ಎಂದು ಅಧಿಕಾರಿಗಳು ದೂರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.