ADVERTISEMENT

ಜೈಲಿನಿಂದ ಬಿಡುಗಡೆಯಾದ ಡ್ರಗ್ ಪೆಡ್ಲರ್‌ನನ್ನು ಪಟಾಕಿ ಸಿಡಿಸಿ ಸ್ವಾಗತಿಸಿದ ಸಹಚರರು

ಪಿಟಿಐ
Published 20 ಜುಲೈ 2025, 14:12 IST
Last Updated 20 ಜುಲೈ 2025, 14:12 IST
<div class="paragraphs"><p>ಡ್ರಗ್ ಪೆಡ್ಲರ್‌&nbsp;ಸಹಚರರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು</p></div>

ಡ್ರಗ್ ಪೆಡ್ಲರ್‌ ಸಹಚರರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು

   

ಮುಂಬೈ: ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಮಾದಕ ವಸ್ತು ಕಳ್ಳ ಸಾಗಣೆ ಪ್ರಕರಣದ ಆರೋಪಿ ಮೊಹಮ್ಮದ್ ಖಾನ್ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಆತನನ್ನು ಸ್ವಾಗತಿಸುವ ಸಲುವಾಗಿ ನಿಷೇಧಾಜ್ಞೆ ಉಲ್ಲಂಘಿಸಿ ಸಂಭ್ರಮಾಚರಣೆ ನಡೆಸಿದ ಆರೋಪದ ಮೇಲೆ 45 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೀರಾ ಬಯಂದರ್‌ ವ್ಯಾಪ್ತಿಯ ಪೊಲೀಸರು 45 ಜನರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಮತ್ತು ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ಸೆಕ್ಷನ್ 189 (ಕಾನೂನುಬಾಹಿರ ಸಭೆ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಮಾದಕ ದ್ರವ್ಯ ನಿಗ್ರಹ ಕಾಯ್ದೆ (ಎನ್‌ಡಿಪಿಎಸ್‌) ಕಾಯ್ದೆಯಡಿ ಬಂಧಿಸಲ್ಪಟ್ಟ ಮಾದಕವಸ್ತು ಮಾರಾಟಗಾರ ಕಮ್ರಾನ್ ಮೊಹಮ್ಮದ್ ಖಾನ್ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ. ಆತನನ್ನು ಅದ್ದೂರಿಯಾಗಿ ಸ್ವಾಗತಿಸಲು ಯೋಚಿಸಿದ್ದ ಸಹಚರರು ಜುಲೈ 16ರಂದು ಠಾಣೆಯ ಕೇಂದ್ರ ಕಾರಾಗೃಹದ ಬಳಿ ಜಮಾಯಿಸಿದ್ದರು. ಬಳಿಕ ಕಾರುಗಳ ಬೆಂಗಾವಲು ಪಡೆ ಮೂಲಕ ಮೀರಾ ರಸ್ತೆಯ ನಯಾನಗರಕ್ಕೆ ತೆರಳಿ ಅಲ್ಲಿನ ಹೋಟೆಲ್‌ವೊಂದರ ಬಳಿ ಪಟಾಕಿ ಸಿಡಿಸಿ ಘೋಷಣೆಗಳನ್ನು ಕೂಗಿದ್ದರು. ಜತೆಗೆ, ಜೋರಾಗಿ ಹಾಡುಗಳನ್ನು ಹಾಕುವ ಮೂಲಕ ಸಾರ್ವಜನಿಕರಲ್ಲಿ ಗೊಂದಲದ ವಾತಾವರಣ ಸೃಷ್ಟಿಸಿದ್ದರು ಎಂದು ಅವರು ಹೇಳಿದ್ದಾರೆ.

ಮೊಹಮ್ಮದ್ ಖಾನ್ ಬೆಂಬಲಿಗರ ಸಂಭ್ರಮಾಚರಣೆಯ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇಲೆ ಈವರೆಗೆ 45 ಜನರ ವಿರುದ್ಧ ಐಫ್‌ಐಆರ್‌ ದಾಖಲಿಸಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.