ADVERTISEMENT

ಅಸ್ಸಾಂ | ₹11.5 ಕೋಟಿ ಮೌಲ್ಯದ ಮಾದಕ ದ್ರವ್ಯ ವಶ, ನಾಲ್ವರ ಬಂಧನ

ಪಿಟಿಐ
Published 25 ಮೇ 2025, 9:07 IST
Last Updated 25 ಮೇ 2025, 9:07 IST
<div class="paragraphs"><p>ಬಂಧನ </p></div>

ಬಂಧನ

   

ಗುವಾಹಟಿ: ಅಸ್ಸಾಂನ ಎರಡು ಜಿಲ್ಲೆಗಳಲ್ಲಿ ₹11.5 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

‘ಶನಿವಾರ ತಡ ರಾತ್ರಿ ಅಸ್ಸಾಂ ಪೊಲೀಸರು ಕರ್ಬಿ ಆಂಗ್ಲಾಂಗ್ ಮತ್ತು ಕ್ಯಾಚರ್ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಕರ್ಬಿ ಆಂಗ್ಲಾಂಗ್ ಚೆಕ್‌ಪೋಸ್ಟ್‌ನಲ್ಲಿ ₹5 ಕೋಟಿ ಮೌಲ್ಯದ 4.899 ಕೆಜಿ ಮಾರ್ಫಿನ್ ವಶಪಡಿಸಿಕೊಳ್ಳಲಾಗಿದೆ’ ಎಂದು ಶರ್ಮಾ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ADVERTISEMENT

ಕ್ಯಾಚರ್‌ನಲ್ಲಿ ನಡೆದ ಎರಡನೇ ಕಾರ್ಯಾಚರಣೆಯಲ್ಲಿ ಜಿಲ್ಲಾ ಪೊಲೀಸರು ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ನಡೆಸಿದ ಕಾರ್ಯಾಚರಣೆಯಲ್ಲಿ ₹6.5 ಕೋಟಿ ಮೌಲ್ಯದ 1.2 ಕೆಜಿ ಹೆರಾಯಿನ್ ಅನ್ನು ಜಪ್ತಿ ಮಾಡಲಾಗಿದೆ ಎಂದು ಶರ್ಮಾ ಮಾಹಿತಿ ನೀಡಿದ್ದಾರೆ.

ಎರಡು ಕಾರ್ಯಾಚರಣೆಗಳಲ್ಲಿ ಅಕ್ರಮವಾಗಿ ಮಾದಕ ದ್ರವ್ಯಗಳನ್ನು ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.