ADVERTISEMENT

₹48 ಕೋಟಿ ಮೌಲ್ಯದ ಮಾದಕ ವಸ್ತು ಕಳ್ಳಸಾಗಣೆ; ಆರು ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 13:11 IST
Last Updated 16 ಡಿಸೆಂಬರ್ 2025, 13:11 IST
<div class="paragraphs"><p>ಮಾದಕ ವಸ್ತು</p></div>

ಮಾದಕ ವಸ್ತು

   

(ಐಸ್ಟೋಕ್ ಚಿತ್ರ)

ನವದೆಹಲಿ: ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಆರು ಮಂದಿಯನ್ನು ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದು, ಅವರಿಂದ ಅಂದಾಜು ₹48 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ADVERTISEMENT

‘ಡಿಸೆಂಬರ್ 11ರಂದು ಬ್ಯಾಂಕಾಕ್‌ನಿಂದ ಬಂದಿಳಿದ ಆರು ಮಂದಿಯ ಬ್ಯಾಗ್‌ಗಳನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಪರಿಶೀಲನೆ ವೇಳೆ 24 ಪ್ಲಾಸ್ಟಿಕ್‌ ಪೌಚ್‌ಗಳನ್ನು ವಶಪಡಿಸಿಕೊಂಡಿದ್ದು, ಅವುಗಳಲ್ಲಿ 48.01 ಕೆಜಿ ತೂಕದಷ್ಟು ಹಸಿರು ಬಣ್ಣದ ಮಾದಕ ವಸ್ತುಗಳು ಪತ್ತೆಯಾಗಿವೆ’ ಎಂದು ಕಸ್ಟಮ್ಸ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಶಕ್ಕೆ ಪಡೆಯಲಾದ ಮಾದಕವಸ್ತು ಗಾಂಜಾ ಎಂಬುದು ಪ್ರಾಥಮಿಕ ಹಂತದ ಪರೀಕ್ಷೆಯಲ್ಲಿ ಗೊತ್ತಾಗಿದೆ. ವಶಪಡಿಸಿಕೊಂಡಿರುವ ಮಾದಕ ವಸ್ತುಗಳ ಮಾರುಕಟ್ಟೆ ಬೆಲೆ ₹48.01 ಕೋಟಿ ಎಂದು ಅಂದಾಜಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.