ADVERTISEMENT

ಕೊಚ್ಚಿ | ₹4 ಕೋಟಿ ಮೌಲ್ಯದ ಗಾಂಜಾ ಹೊಂದಿದ್ದ ಯುವಕನ ಬಂಧನ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2025, 6:30 IST
Last Updated 26 ಆಗಸ್ಟ್ 2025, 6:30 IST
<div class="paragraphs"><p>ಚಿತ್ರ ಕೃಪೆ: ಪ್ರಾತಿನಿಧಿಕ ಚಿತ್ರ&nbsp;</p></div>

ಚಿತ್ರ ಕೃಪೆ: ಪ್ರಾತಿನಿಧಿಕ ಚಿತ್ರ 

   

ಕೊಚ್ಚಿ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತ್ರಿಶೂರ್ ಮೂಲದ 27 ವರ್ಷದ ವ್ಯಕ್ತಿಯೊಬ್ಬ ನಾಲ್ಕು ಕಿಲೋಗ್ರಾಂಗಳಿಗೂ ಹೆಚ್ಚು ಹೈಬ್ರಿಡ್ ಗಾಂಜಾದೊಂದಿಗೆ ಸಿಕ್ಕಿಬಿದ್ದಿದ್ದಾನೆ.

ಯುವಕ ಬ್ಯಾಂಕಾಕ್‌ನಿಂದ ಕ್ವಾಲಲಾಂಪುರ ಮೂಲಕ ಇಲ್ಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಆತನನ್ನು ಪರಿಶೀಲಿಸುವ ವೇಳೆ ಗಾಂಜಾ ಪತ್ತೆಯಾಗಿದೆ.

ADVERTISEMENT

ಹೈಬ್ರಿಡ್ ಗಾಂಜಾವನ್ನು ನಾಲ್ಕು ವ್ಯಾಕ್ಯೂಮ್ ಸೀಲ್ ಪ್ಯಾಕೆಟ್‌ಗಳಲ್ಲಿ ಪ್ಯಾಕ್ ಮಾಡಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಗಾಂಜಾ ಹೊಂದಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಮಾದಕವಸ್ತು ಕಳ್ಳಸಾಗಣೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬ್ಯಾಂಕಾಕ್‌ನಿಂದ ಮಾದಕ ವಸ್ತುಗಳನ್ನು ಸಾಗಾಣೆ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿಯ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಿಸಲಾಗಿದೆ. ವಶಕ್ಕೆ ಪಡೆದಿರುವ ಮಾದಕ ವಸ್ತುಗಳ ಬೆಲೆ ₹4 ಕೋಟಿಗೂ ಅಧಿಕ ಬೆಲೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.