ಹೈದರಾಬಾದ್: ₹7.3 ಲಕ್ಷ ಮೌಲ್ಯದ ಮಾದಕ ವಸ್ತುಗಳ ವಹಿವಾಟು ನಡೆಸುತ್ತಿದ್ದ ಆರೋಪದಡಿ ಬೆಂಗಳೂರಿನ ವಿದ್ಯಾರ್ಥಿ ಮತ್ತು ಹೈದರಾಬಾದ್‌ನ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಲಭ್ಯವಾದ ಮಾಹಿತಿಯ ಆಧಾರದಲ್ಲಿ ಹೈದರಾಬಾದ್ ಮಾದಕವಸ್ತು ನಿಗ್ರಹ ಘಟಕವು (ಎಚ್‌ಎನ್‌ಇಡಬ್ಲ್ಯೂ) ದೊಮಲಗುಡ್ಡ ಪ್ರದೇಶದಲ್ಲಿ ಮಂಗಳವಾರ ಆರೋಪಿಗಳನ್ನು ಬಂಧಿಸಿದೆ.
12.57 ಗ್ರಾಂ ಎಂಡಿಎಂಎ, 305 ಗ್ರಾಂ ಗಾಂಜಾ, ಒಂದು ಕಾರು ಮತ್ತು ಮೂರು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ
ಬಿಸಿಎ ವಿದ್ಯಾರ್ಥಿ(19 ವರ್ಷ) ನೈಜೀರಿಯ ವ್ಯಕ್ತಿಗಳಿಂದ ಮಾದಕ ವಸ್ತುಗಳನ್ನು ಪಡೆದುಕೊಂಡು ಖಾಸಗಿ ಕಂಪನಿಯ ಉದ್ಯೋಗಿಗೆ(27 ವರ್ಷ) ತಲುಪಿಸುತ್ತಿದ್ದರು. ಬಳಿಕ ಅದನ್ನು ಹೈದರಾಬಾದ್‌ನಲ್ಲಿ ಮಾರಾಟ ಮಾಡುತ್ತಿದ್ದರು. ಅವರಿಬ್ಬರು ಸಾಮಾಜಿಕ ಜಾಲತಾಣದ ಮೂಲಕ ಸ್ನೇಹಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.