ಮುಂಬೈ : ಡ್ರಗ್ಸ್ ಪ್ರಕರಣದಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್‌ನನ್ನು ಮುಂಬೈನ ಮಾದಕವಸ್ತು ನಿಯಂತ್ರಣ ಬ್ಯೂರೊ (ಎನ್‌ಸಿಬಿ) ಬುಧವಾರ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚೆಗೆ ವಶಪಡಿಸಿಕೊಂಡ 15 ಕೆ.ಜಿ ಹಶೀಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಕರ್‌ನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಆತ ಭಾಗಿಯಾಗಿದ್ದಾನೆ ಎಂಬುದು ಕಂಡುಬಂದಿದೆ ಎಂದು ತಿಳಿಸಿರುವ ಅಧಿಕಾರಿಗಳು, ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ.
ಕಸ್ಕರ್‌ನನ್ನು 2017ರಲ್ಲಿ ಠಾಣೆ ಪೊಲೀಸರು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿದ್ದರು. ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ ನಂತರ, ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್‌ನಲ್ಲಿರುವ ಎನ್‌ಸಿಬಿ ಕಚೇರಿಗೆ ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.