ಮಾದಕ ವಸ್ತು
(ಐಸ್ಟೋಕ್ ಚಿತ್ರ)
ಇಟಾನಗರ: ಅರುಣಾಚಲ ಪ್ರದೇಶದ ಪೂರ್ವ ಮತ್ತು ಪಶ್ಚಿಮ ಕಾಮೆಂಗ್ ಜಿಲ್ಲೆಗಳಲ್ಲಿ 210 ಕೆ.ಜಿ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೂರ್ವ ಕಾಮೆಂಗ್ ಜಿಲ್ಲೆಯ ಸೆಪ್ಪಾ ಪಟ್ಟಣದ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮತ್ತು ಹೆಚ್ಚುವರಿ ಸಹಾಯಕ ಆಯುಕ್ತ ತಾಶಿ ಥೋಂಗ್‌ಡಾಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಮತ್ತೊಂದೆಡೆ ಪಶ್ಚಿಮ ಕಾಮೆಂಗ್ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಕಲಾಕ್ಟಾಂಗ್‌ನ ನಿವಾಸಿ ತ್ಸೆರಿಂಗ್ ಫುಂಟ್ಸೊ ಅವರಿಂದ ನಿಷೇಧಿತ ವಸ್ತುಗಳನ್ನು ಪಡೆಯಲಾಗಿದೆ. ಶೋಧ ಕಾರ್ಯಾಚರಣೆಯಲ್ಲಿ ಗಾಂಜಾ ಗೋಣಿಚೀಲಗಳನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ
ಮೂವರು ಆರೋಪಿಗಳಿಂದ ಸುಮಾರು 210 ಕೆ.ಜಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.