ರೇವ್ ಪಾರ್ಟಿ
ಸಾಂದರ್ಭಿಕ ಚಿತ್ರ
ಪುಣೆ: ಭಾನುವಾರ ಮುಂಜಾನೆ ಪುಣೆಯ ಅಪಾರ್ಟ್‌ಮೆಂಟ್‌ನಲ್ಲಿ ನಡೆಯುತ್ತಿದ್ದ ಪಾರ್ಟಿಯ ಮೇಲೆ ದಾಳಿ ನಡೆಸಿದ ಪೊಲೀಸರು ಮಾದಕ ದ್ರವ್ಯ, ಹುಕ್ಕಾ ಸೆಟಪ್‌ಗಳು ಮತ್ತು ಮದ್ಯವನ್ನು ವಶಪಡಿಸಿಕೊಂಡು ಏಳು ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೇವ್ ಪಾರ್ಟಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಮಹಾರಾಷ್ಟ್ರದ ಪುಣೆ ನಗರದ ದುಬಾರಿ ಖರಾಡಿ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್ ಮೇಲೆ ಪೊಲೀಸರ ಅಪರಾಧ ವಿಭಾಗ ದಾಳಿ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರ್ಯಾಚರಣೆಯ ಸಮಯದಲ್ಲಿ, ಗಾಂಜಾ, ಮದ್ಯ ಮತ್ತು ಹುಕ್ಕಾದಂತಹ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಖರಡಿ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಬಗ್ಗೆ ನಮಗೆ ಮಾಹಿತಿ ಬಂದಿತ್ತು. ಅದರಂತೆ, ನಮ್ಮ ಅಪರಾಧ ವಿಭಾಗದ ತಂಡ ದಾಳಿ ನಡೆಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಾಳಿಯ ಸಮಯದಲ್ಲಿ, ಗಾಂಜಾ, ಮದ್ಯ ಮತ್ತು ಹುಕ್ಕಾದಂತಹ ಮಾದಕ ವಸ್ತುಗಳು ಪತ್ತೆಯಾಗಿವೆ. ಐವರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಬಂಧಿತ ಪುರುಷರಲ್ಲಿ ಒಬ್ಬರು ಮಹಿಳಾ ರಾಜಕಾರಣಿಯ ಪತಿ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.