ಏರ್ ಇಂಡಿಯಾ ವಿಮಾನ
(ರಾಯಿಟರ್ಸ್ ಚಿತ್ರ)
ನವದೆಹಲಿ: ಬ್ಯಾಂಕಾಕ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ವ್ಯಕ್ತಿಯೊಬ್ಬ ತನ್ನ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಬುಧವಾರ ನಡೆದಿದೆ.
ಈ ಬಗ್ಗೆ ಏರ್ ಇಂಡಿಯಾ ವಿಮಾನಯಾನ ಕಂಪನಿಯು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ (ಡಿಜಿಸಿಎ) ವರದಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯಿಂದ ಬ್ಯಾಂಕಾಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಘಟನೆ ನಡೆದಿದೆ. ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಮದ್ಯಪಾನ ಮಾಡಿದ್ದ ಎಂದು ಏರ್ ಇಂಡಿಯಾ ಸಿಬ್ಬಂದಿ ಹೇಳಿದ್ದಾರೆ.
ಈ ಪ್ರಕರಣ ಕುರಿತು ವಿಮಾನಯಾನ ಕಂಪನಿ ಜೊತೆಗೆ ಸಚಿವಾಲಯವು ಚರ್ಚಿಸಲಿದೆ. ಕೃತ್ಯ ಎಸಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.