
ಪಿಟಿಐ
ಹೈದರಾಬಾದ್: ದುಬೈ–ಹೈದರಾಬಾದ್ ಎಮಿರೆಟ್ಸ್ ವಿಮಾನಕ್ಕೆ ಶುಕ್ರವಾರ ಬಾಂಬ್ ಬೆದರಿಕೆ ಹಾಕಲಾಗಿತ್ತು.
ದುಬೈನಿಂದ ಬರುತ್ತಿದ್ದ ಎಕೆ526 ವಿಮಾನದಲ್ಲಿ ಬಾಂಬ್ ಇರಿಸಿರುವುದಾಗಿ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 7:30ಕ್ಕೆ ಬೆದರಿಕೆ ಸಂದೇಶವೊಂದು ಬಂದಿತ್ತು. 8:30ಕ್ಕೆ ವಿಮಾನವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದ್ದು, ಬಳಿಕ ತಪಾಸಣೆ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.