ADVERTISEMENT

ದುರ್ಗಾಪುರ ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಸಾಧ್ಯತೆ?

ಏಜೆನ್ಸೀಸ್
Published 15 ಅಕ್ಟೋಬರ್ 2025, 5:34 IST
Last Updated 15 ಅಕ್ಟೋಬರ್ 2025, 5:34 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಕೋಲ್ಕತ್ತ: ದುರ್ಗಾಪುರದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಸ್ನೇಹಿತ ಸೇರಿ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಸುದ್ದಿ ವಾಹಿನಿ ಎನ್‌ಡಿಟಿವಿ ವರದಿ ಮಾಡಿದೆ.

ADVERTISEMENT

ಪೊಲೀಸರು ಐವರು ಬಂಧಿತ ಆರೋಪಿಗಳು ಮತ್ತು ಸಂತ್ರಸ್ತೆಯ ಸ್ನೇಹಿತನೊಂದಿಗೆ ಮಂಗಳವಾರ ಘಟನೆಯ ಮರುಸೃಷ್ಟಿ ನಡೆಸಿದ್ದಾರೆ. ಆರು ಜನ ಆರೋಪಿಗಳನ್ನು ಬುಧವಾರ ಸಂಜೆ ವೇಳೆಗೆ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗುವುದು ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಈಗಾಗಲೇ ಪೊಲೀಸರು ಆರೋಪಿಗಳ ತನಿಖೆ ಮಾಡಿದ್ದು ಘಟನೆ ನಡೆದ ದಿನ ಅವರ ಧರಿಸಿದ್ದ ಬಟ್ಟೆಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೂ ಮೊಬೈಲ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಈ ಎಲ್ಲವನ್ನೂ ವಿಧಿವಿಜ್ಞಾನ ಸಂಸ್ಥೆಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ಗೆಳೆಯನನ್ನು ಹೊರತುಪಡಿಸಿದರೆ ಐವರಲ್ಲಿ ಒಬ್ಬರು, ಸಂತ್ರಸ್ತೆಯು ವ್ಯಾಸಂಗ ಮಾಡುತ್ತಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಮಾಜಿ ಭದ್ರತಾ ಸಿಬ್ಬಂದಿ. ಇನ್ನೊಬ್ಬರು, ಇದೇ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಮತ್ತೊಬ್ಬ ಆರೋಪಿಯು ದುರ್ಗಾಪುರದ ಸ್ಥಳೀಯ ಸಂಸ್ಥೆಯಲ್ಲಿ ಗುತ್ತಿಗೆ ನೌಕರ, ಮತ್ತೊಬ್ಬರು ನಿರುದ್ಯೋಗಿ’ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.