ದುರ್ಗಾಪುರ: ಪಶ್ಚಿಮ ಬಂಗಾಳದ ಪಶ್ಚಿಮ ವರ್ದ್‌ಮಾನ್ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ನಡೆಸಿದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಸ್ನೇಹಿತನಿಗೆ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಈ ಪ್ರಕರಣದಲ್ಲಿ 6ನೇ ಆರೋಪಿಯಾಗಿ ಸಂತ್ರಸ್ತೆಯ ಸ್ನೇಹಿತನನ್ನು ಬಂಧಿಸಲಾಗಿತ್ತು.
ಇಲ್ಲಿನ ನ್ಯಾಯಾಲಯವು ಸಂತ್ರಸ್ತೆಯ ಸ್ನೇಹಿತನನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ಇತರೆ ಐವರು ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ಶುಕ್ರವಾರ ರಾತ್ರಿ ಒಡಿಶಾದ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು.
ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗಡೆ ಸ್ನೇಹಿತನೊಂದಿಗೆ ರಾತ್ರಿ ಊಟಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿತ್ತು.
ಈ ಘಟನೆಯು ಪಶ್ಚಿಮ ಬಂಗಾಳದ ರಾಜಕೀಯ ಕೋಲಾಹಲಕ್ಕೆ ಕಾರಣವಾಯಿತು.