ಅಪಘಾತ
ಸಾಂದರ್ಭಿಕ ಚಿತ್ರ
ನವದೆಹಲಿ: ದ್ವಾರಕಾದಲ್ಲಿಈ ತಿಂಗಳು ನಡೆದ ಎಸ್‌ಯುವಿ–ಬೈಕ್ ನಡುವಣ ಅಪಘಾತದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಅಪಘಾತದಲ್ಲಿ ಬೈಕ್ ಚಾಲಕ 23 ವರ್ಷ ಸಾಹಿಲ್ ಧನೇಶ್ರಾ ಅವರು ಮೃತಪಟ್ಟಿದ್ದಾರೆ.
ಬೈಕ್ ಚಾಲಕನ ತಾಯಿ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ‘ಪರವಾನಗಿ ಇರದ ಕಾರು ಚಾಲಕ ಅತಿ ವೇಗವಾಗಿ ಚಾಲನೆ ಮಾಡಿದ್ದರ ಪರಿಣಾಮವಾಗಿ ದುರಂತ ಸಂಭವಿಸಿದೆ’ ಎಂದು ದೂರಿದ್ದಾರೆ. ತಮ್ಮ ಮಗನ ಸಾವಿಗೆ ನ್ಯಾಯ ಒದಗಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಎಸ್‌ಯುವಿ ಚಾಲಕನನ್ನು ಬಾಲನ್ಯಾಯಮಂಡಳಿ ಎದುರು ಹಾಜರುಪಡಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ರಸ್ತೆ ತಿರುವಿನಲ್ಲಿ ಕಾರನ್ನು ತಿರುಗಿಸಿ, ಎರಡೂ ಕಡೆಗಳಲ್ಲಿ ಬೈಕ್‌ಗಳನ್ನು ನಿಲ್ಲಿಸಿದ್ದ ಕಿರಿದಾದ ರಸ್ತೆಯಲ್ಲಿ ವೇಗವಾಗಿ ಕಾರು ಚಲಾಯಿಸಿದ ದೃಶ್ಯ ವಿಡಿಯೊದಲ್ಲಿದೆ. ಚಾಲಕನ ಸಹೋದರಿ ಕಾರಿನಲ್ಲಿ ಕುಳಿತು ವಿಡಿಯೊ ಚಿತ್ರೀಕರಿಸಿದ್ದಾರೆ ಎಂದು ಹೇಳಲಾಗಿದೆ.
ವಿಡಿಯೊವನ್ನು ಪರಿಶೀಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.