ADVERTISEMENT

ಇ ಸಿಗರೇಟು ಮಾರಾಟ ಅಬಾಧಿತ

ಪಿಟಿಐ
Published 23 ಅಕ್ಟೋಬರ್ 2019, 19:31 IST
Last Updated 23 ಅಕ್ಟೋಬರ್ 2019, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇ–ಸಿಗರೇಟ್ ಮಾರಾಟ ನಿಷೇಧಿಸಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದರೂ, ಆನ್‌ಲೈನ್ ಜಾಲತಾಣಗಳು ಮತ್ತು ಅಂಗಡಿಗಳಲ್ಲಿ ಇವುಗಳ ಮಾರಾಟ ಮುಂದುವರಿದಿದ್ದು, ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ಇ–ಸಿಗರೇಟ್‌ನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಗ್ರಾಹಕರು ಮತ್ತು ಮಾರಾಟಗಾರರಿಗೆ ಜಾಗೃತಿಯುಂಟು ಮಾಡುವ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ.

ಪರ್ಯಾಯ ಧೂಮಪಾನ ಸಾಧನಗಳ ಉತ್ಪಾದನೆ, ಆಮದು–ರಫ್ತು, ಸಂಗ್ರಹ, ಮಾರಾಟ–ಸಾಗಾಣಿಕೆ, ಜಾಹೀರಾತುಗಳನ್ನು ನಿರ್ಬಂಧಿಸಿ ಸೆಪ್ಟೆಂಬರ್‌ 18ರಂದು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಇದನ್ನು ಉಲ್ಲಂಘಿಸಿದವರಿಗೆ ಜೈಲುಶಿಕ್ಷೆ ಮತ್ತು ದಂಡ ವಿಧಿಸುವುದಾಗಿ ಎಚ್ಚರಿಕೆಯನ್ನೂ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.