ADVERTISEMENT

ಕೋವಿಶೀಲ್ಡ್, ಕೋವಾಕ್ಸಿನ್ ಪ್ರತಿ ಡೋಸ್‌ಗೆ ₹275 ನಿಗದಿ ಸಾಧ್ಯತೆ

ಪಿಟಿಐ
Published 26 ಜನವರಿ 2022, 14:28 IST
Last Updated 26 ಜನವರಿ 2022, 14:28 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಭಾರತೀಯ ಔಷಧ ನಿಯಂತ್ರಕರಿಂದ ಶೀಘ್ರದಲ್ಲೇ ಸಾಮಾನ್ಯ ಮಾರುಕಟ್ಟೆಗೆ ಅನುಮೋದನೆ ಪಡೆಯುವ ನಿರೀಕ್ಷೆಯಿರುವ ಕೋವಿಡ್‌ ಲಸಿಕೆಗಳಾದ ಕೋವಿಶೀಲ್ಡ್‌ ಮತ್ತು ಕೋವ್ಯಾಕ್ಸಿನ್‌ ಬೆಲೆಯನ್ನು ಪ್ರತಿ ಡೋಸ್‌ಗೆ ₹275 ಮತ್ತು ಹೆಚ್ಚುವರಿ ಸೇವಾ ಶುಲ್ಕವಾಗಿ ₹150 ನಿಗದಿಪಡಿಸುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಲಸಿಕೆಗಳನ್ನು ಕೈಗೆಟಕುವ ಬೆಲೆಗೆ ನೀಡುವಂತೆ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು (ಎನ್‌ಪಿಪಿಎ) ನಿರ್ದೇಶನ ನೀಡಿದೆ ಎಂದೂ ಹೇಳಿವೆ.

ಸದ್ಯಕ್ಕೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್‌ನ ಪ್ರತಿ ಡೋಸ್‌ಗೆ ₹1,200 ಮತ್ತು ಕೋವಿಶೀಲ್ಡ್‌ನ ಪ್ರತಿ ಡೊಸ್‌ಗೆ ₹780 ಇದೆ. ಇದು ₹150 ಸೇವಾಶುಲ್ಕವನ್ನೂ ಒಳಗೊಂಡಿದೆ. ಎರಡೂ ಲಸಿಕೆಗಳಿಗೆ ದೇಶದಲ್ಲಿ ತುರ್ತು ಬಳಕೆಗೆ ಮಾತ್ರ ಅನುಮೋದನೆ ನೀಡಲಾಗಿದೆ.

ADVERTISEMENT

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್‌ ಲಸಿಕೆಗಳನ್ನು ಸಾಮಾನ್ಯ ಮಾರುಕಟ್ಟೆಯಲ್ಲಿ ಒದಗಿಸಲು ಕೇಂದ್ರದ ಔಷಧ ನಿಯಂತ್ರಣ ಮಂಡಳಿಯ ತಜ್ಞರ ಸಮಿತಿಯು ಈಚೆಗೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.