ADVERTISEMENT

ಜೈಶಂಕರ್‌–ಬ್ಲಿಕೆನ್‌ ಮಾತುಕತೆ, ಆಫ್ಗನ್‌ ಶಾಂತಿಗೆ ಬದ್ಧತೆ

ಪಿಟಿಐ
Published 20 ಏಪ್ರಿಲ್ 2021, 5:53 IST
Last Updated 20 ಏಪ್ರಿಲ್ 2021, 5:53 IST
ಎಸ್‌ ಜೈಶಂಕರ್‌
ಎಸ್‌ ಜೈಶಂಕರ್‌   

ವಾಷಿಂಗ್ಟನ್‌: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಟೋನಿ ಬ್ಲಿಕೆನ್‌ ಅವರು ಸೋಮವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಆರೋಗ್ಯ ಕ್ಷೇತ್ರದಲ್ಲಿ ಪರಸ್ಪರ ಸಹಕರಿಸುವ ಕುರಿತು ಚರ್ಚಿಸಿದರು.

‘ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್‌ ಜೈಶಂಕರ್‌ ಅವರೊಂದಿಗೆ ಮಾತುಕತೆ ನಡೆಸಿದೆ. ಈ ವೇಳೆ ನಾವು, ಅಫ್ಗಾನಿಸ್ತಾನ, ಮ್ಯಾನ್ಮಾರ್ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚರ್ಚೆ ನಡೆಸಿದೆವು’ ಎಂದು ಬ್ಲಿಕೆನ್‌ ಟ್ವೀಟ್‌ ಮಾಡಿದ್ದಾರೆ.

‘ಭಾರತ ಮತ್ತು ನೆರೆರಾಷ್ಟ್ರ‌ಗಳ ನಡುವಿನ ಇತ್ತೀಚಿಗಿನ ಬೆಳವಣಿಗೆಗಳು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾರ್ಯಾಸೂಚಿ ಮತ್ತು ಆರೋಗ್ಯ ಸಹಕಾರದ ಬಗ್ಗೆಯೂ ಚರ್ಚೆ ನಡೆಸಲಾಯಿತು’ ಎಂದು ಜೈಶಂಕರ್ ಅವರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

‘ಅಫ್ಗಾನಿಸ್ತಾನದಲ್ಲಿ ಅಭಿವೃದ್ಧಿ ಮತ್ತು ಶಾಂತಿ ಸ್ಥಾಪನೆಗಾಗಿ ನಿರಂತರ ಸಹಕಾರ ನೀಡಲು ಉಭಯ ನಾಯಕರು ಒಪ್ಪಿಕೊಂಡರು. ಜತೆಗೆ, ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪನೆಗೂ ಸಹಾಯ ಮಾಡಲು ಅಮೆರಿಕ ಮತ್ತು ಭಾರತ ಬದ್ಧವಾಗಿದೆ ಎಂಬುದನ್ನು ಅವರು ಪುನರುಚ್ಚರಿಸಿದರು’ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್‌ ಪ್ರೈಸ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.