ಲಘು ಭೂಕಂಪ
ನವದೆಹಲಿ: ಹರಿಯಾಣ, ಉತ್ತರ ಪ್ರದೇಶ ಹಾಗೂ ದೆಹಲಿ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುರುವಾರ ಬೆಳಗ್ಗೆ ಭೂಕಂಪ ಸಂಭವಿಸಿದ್ದು ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದ್ದು ಸುಮಾರು 10 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಯಿತು ಎಂದು ಸ್ಥಳೀಯರು ಹೇಳಿದ್ದಾರೆ.
ಬೆಳಗ್ಗೆ 9 ಹಂಟೆ ಸುಮಾರಿಗೆ ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ, ಫರಿದಾಬಾದ್, ರೋಹ್ಟಕ್, ಭಿವಾನಿ, ಬಹದ್ದೂರ್‌ಗಢ ಸೇರಿದಂತೆ ಹಲವು ನಗರಗಳಲ್ಲಿ ಕಂಪನದ ಅನುಭವವಾಯಿತು ಎಂದು ಜನರು ಹೇಳಿದ್ದಾರೆ.
ಹರಿಯಾಣದ ಝಜ್ಜರ್ ಪಟ್ಟಣದಿಂದ 10.ಕಿ.ಮೀ ದೂರದದಲ್ಲಿ ಭೂಕಂಪದ ಕೇಂದ್ರಬಿಂದು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಈ ಮೂರು ರಾಜ್ಯಗಳ ಜನರು ಹಠಾತ್ ಕಂಪನದಿಂದಾಗಿ ಜನರು ಭಯಭೀತರಾದರು. ಕಂಪನದಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.