ADVERTISEMENT

ದೆಹಲಿಯಲ್ಲಿ ಮತ್ತೆ ಲಘು ಭೂಕಂಪ

ಏಜೆನ್ಸೀಸ್
Published 13 ಏಪ್ರಿಲ್ 2020, 10:39 IST
Last Updated 13 ಏಪ್ರಿಲ್ 2020, 10:39 IST
   

ನವದೆಹಲಿ: ದೆಹಲಿ ಮತ್ತು ಸುತ್ತುಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಮಧ್ಯಾಹ್ನ ಲಘು ಭೂಕಂಪನ ಅನುಭವಕ್ಕೆ ಬಂದಿದೆ. ಸತತ ಎರಡನೇ ದಿನ ಈ ರೀತಿ ಭೂಕಂಪ ಆಗಿದೆ.

ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆ ದಾಖಲಾಗಿದೆ. ಮಧ್ಯಾಹ್ನ 1.26ಕ್ಕೆ 5 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿದೆ. ಭೂಕಂಪದಿಂದ ಯಾವುದೇ ರೀತಿಯ ಹಾನಿಸಂಭವಿಸಿಲ್ಲ.

ಭಾನುವಾರ 3.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ದೆಹಲಿಯ ವಜೀರಾಬಾದ್ ಭೂಕಂಪದ ಕೇಂದ್ರ ಬಿಂದುವಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.