ಹಿಮಾಚಲ ಪ್ರದೇಶದಲ್ಲಿ ಭೂಕಂಪ
ಶಿಮ್ಲಾ: ಇಂದು (ಬುಧವಾರ) ನಸುಕಿನ ವೇಳೆ ಸುಮಾರು ಒಂದು ತಾಸಿನ ಅವಧಿಯಲ್ಲಿ ಹಿಮಾಚಲ ಪ್ರದೇಶದ ಚಂಬಾದಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಮೊದಲ ಬಾರಿ ಇಂದು ನಸುಕಿನ ಜಾವ 3.27ಕ್ಕೆ ರಿಕ್ಟರ್ ಮಾಪಕದಲ್ಲಿ 3.3ರ ತೀವ್ರತೆಯ ಕಂಪನ ಉಂಟಾಗಿತ್ತು. ಬಳಿಕ 4.39ರ ಹೊತ್ತಿಗೆ ಎರಡನೇ ಸಲ 4ರ ತೀವ್ರತೆಯ ಲಘು ಭೂಕಂಪನ ಉಂಟಾಗಿದೆ.
ಮೊದಲ ಕಂಪನದಲ್ಲಿ ಭೂಮಿಯ ಮೇಲ್ಮೈಯಿಂದ 20 ಕಿ.ಮೀ. ಹಾಗೂ ಎರಡನೇ ಸಲ 10 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಎನ್‌ಸಿಎಸ್ ತಿಳಿಸಿದೆ.
ಪಾಕಿಸ್ತಾನದಲ್ಲಿ ಭೂಕಂಪ...
ಮಂಗಳವಾರ ತಡರಾತ್ರಿ 2.38ರ ಹೊತ್ತಿಗೆ ಪಾಕಿಸ್ತಾನದಲ್ಲಿ ಭೂಕಂಪ ಸಂಭವಿಸಿದೆ ಎಂದೂ ಎನ್‌ಸಿಎಸ್ ಮಾಹಿತಿ ನೀಡಿದೆ.
ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆ ದಾಖಲಾಗಿದ್ದು, 170 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.