ADVERTISEMENT

ಮಣಿಪುರ, ಅಫ್ಗಾನಿಸ್ತಾನ, ತಜಕಿಸ್ತಾನದಲ್ಲಿ ಭೂಕಂಪ 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಫೆಬ್ರುವರಿ 2023, 4:03 IST
Last Updated 28 ಫೆಬ್ರುವರಿ 2023, 4:03 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

‌ನವದೆಹಲಿ: ದೇಶದ ಮಣಿಪುರ ರಾಜ್ಯ ಸೇರಿದಂತೆ ತಜಕಿಸ್ತಾನ ಹಾಗೂ ಅಫ್ಗಾನಿಸ್ತಾನದಲ್ಲಿ ಮಂಗಳವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.

ಮಣಿಪುರದ ನೋನಿ ಜಿಲ್ಲೆಯಲ್ಲಿ ಬೆಳಗ್ಗೆ 3 ಗಂಟೆ ಸುಮಾರಿಗೆ ಭೂಕಂಪ ಸಂಭವಿಸಿದೆ. ಭೂಮಿಯಿಂದ 25 ಕೀ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ.

ತಜಕಿಸ್ತಾನದಲ್ಲಿ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾದರೆ, ಅಫ್ಗಾನಿಸ್ತಾನದಲ್ಲಿ 4.1 ತೀವ್ರತೆ ದಾಖಲಾಗಿದೆ ಎಂದು ಎನ್‌ಸಿಎಸ್ ತಿಳಿಸಿದೆ.

ADVERTISEMENT

ತಕ್ಷಣಕ್ಕೆ ಉಭಯ ದೇಶಗಳಲ್ಲಿ ಯಾವುದೇ ಆಸ್ತಿ–ಪಾಸ್ತಿ ಹಾಗೂ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಕಳೆದ ವಾರದಲ್ಲಿ ತಜಕಿಸ್ತಾನ ಹಾಗೂ ಅಫ್ಗಾನಿಸ್ತಾನ ಐದಾರು ಭಾರಿ ಭೂಕಂಪವಾಗಿದೆ. ತೀವ್ರತೆಯ ಪ್ರಮಾಣ ಕಡಿಮೆ ಇರುವುದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಅಲ್ಲಿನ ಸರ್ಕಾರಗಳು ಮಾಹಿತಿ ನೀಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.