ADVERTISEMENT

ಭಾರತ–ನೇಪಾಳ ಗಡಿ ಬಳಿ ಭೂಕಂಪ: ದೆಹಲಿ, ಉತ್ತರಾಖಂಡದಲ್ಲೂ ನಡುಗಿದ ಭೂಮಿ

ಏಜೆನ್ಸೀಸ್
Published 19 ನವೆಂಬರ್ 2019, 14:27 IST
Last Updated 19 ನವೆಂಬರ್ 2019, 14:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ಭಾರತ–ನೇಪಾಳ ಗಡಿ ಪ್ರದೇಶದ ಬಳಿ ಅರಣ್ಯ ಭಾಗದಲ್ಲಿ ಮಂಗಳವಾರ ಸಂಜೆ ಲಘು ಭೂಕಂಪ ಸಂಭವಿಸಿದೆ. ಪರಿಣಾಮವಾಗಿ ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಕೆಲವೆಡೆಗಳಲ್ಲಿಯೂ ಭೂಮಿ ಕಂಪಿಸಿದೆ.

ಭೂಕಂಪದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 5.3ರಷ್ಟಿತ್ತು. ಸ್ಥಳೀಯ ಕಾಲಮಾನ ಪ್ರಕಾರ ಸಂಜೆ 7.30 ಸುಮಾರಿಗೆ ಭೂಮಿ ಕಂಪಿಸಿದೆ.

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಪ್ರಕಾರ, ನೇಪಾಳದ ಖಪ್ತಾಡ್ ರಾಷ್ಟ್ರೀಯ ಉದ್ಯಾನದ ಬಳಿ 1.3 ಕಿ.ಮೀ ಆಳದಲ್ಲಿ ಕಂಪನ ಕೇಂದ್ರ ದಾಖಲಾಗಿದೆ.

ADVERTISEMENT

ಅದೃಷ್ಟವಶಾತ್, ಸಾವು–ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ದೊರೆಯಬೇಕಿದೆ.

2015ರಲ್ಲಿ ನೇಪಾಳದಲ್ಲಿ ಸಂಭವಿಸಿದ್ದ ಭಾರಿ ಭೂಕಂಪದಲ್ಲಿ ಸುಮಾರು 9,000 ಜನ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.