ಗೋಪೇಶ್ವರ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 4.7ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ತಿಳಿಸಿದೆ.
ಮುಂಜಾನೆ 5.58ಕ್ಕೆ ಭೂಕಂಪ ಸಂಭವಿಸಿದ್ದು, ಕಂಪನದ ಕೇಂದ್ರಬಿಂದು ಗೋಪೇಶ್ವರದಿಂದ 13 ಕಿ.ಮೀ. ದೂರದಲ್ಲಿದೆ ಎಂದು ಕೇಂದ್ರವು ಮಾಹಿತಿ ನೀಡಿದೆ.
‘ಭೂಮಿ ಕಂಪಿಸಿದ್ದರಿಂದ ಭಯಗೊಂಡ ಜನರು ಮನೆಯಿಂದ ಹೊರಗೆ ಓಡಿಬಂದರು. ಇದುವರೆಗೆ ಯಾವುದೇ ಸಾವು–ನೋವಿನ ವರದಿಯಾಗಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.